Featured

ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24

ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24

ಉಡುಪಿ: ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ ಭದ್ರತೆ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಮುಖಂಡ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಸರ್ಕಾರದ ಮುಖ್ಯ ಸಚೇತಕರೂ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ಡಿಕೆಶಿಗೆ ಅವರ ಪಕ್ಷದಲ್ಲಿ ಅಭದ್ರತೆ ಕಾಡುತ್ತಿರಬೇಕು. ಹಾಗಾಗಿ ಇನ್ನೊಬ್ಬರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಮುಖ್ಯಮಂತ್ರಿಗಳಿಗೆ ಭದ್ರತೆಯ ಸಮಸ್ಯೆಯೇ ಇಲ್ಲ ಎಂದ ಸುನಿಲ್ ಕುಮಾರ್, ಡಿಕೆಶಿ ಅವರೊಂದಿಗೆ ಸಿದ್ದರಾಮಯ್ಯ ಜೊತೆಗಿನ ಭಿನ್ನಮತ ಈಗಾಗಲೇ ಬಹಿರಂಗವಾಗಿದೆ. ಬಿಜೆಪಿ ಸರ್ಕಾರದ ಅವಧಿ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಕಾಲಾವಕಾಶ ಇದೆ. ಈಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಶುರುವಾಗಿದೆ. ಡಿಕೆಶಿಗೆ ಆ ಅಭದ್ರತೆ ಕಾಡುತ್ತಿರಬಹುದು.

ಡಿ.ಕೆ ಶಿವಕುಮಾರ್ ಗೆ ಸಿದ್ದರಾಮಯ್ಯ, ಪರಮೇಶ್ವರ್ ರನ್ನು ಕಂಡಾಗ ಅಭದ್ರತೆ ಕಾಡಬಹುದು. ಸದ್ಯ ನಮ್ಮಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ನೂರಕ್ಕೆ ನೂರು ಪ್ರತಿಶತ ಯಾವುದೇ ಚರ್ಚೆ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

5 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

5 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

6 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

6 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

10 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

10 hours ago