ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.
ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.
ಇದೇ ಬರುವ ಫೆಬ್ರವರಿಯಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.
ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವಪ್ರಭಾ ಪುರಸ್ಕಾರದ ಪ್ರಾಯೋಜಕರು ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣಿೈ, ಉಪಾಧ್ಯಕ್ಷರಾದ ಸಂಧ್ಯಾ ಶೆಣೆೈ, ವಿಘ್ನೇಶ್ವರ ಅಡಿಗ, ಹಾಗೂ ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.
ಮಾಕ್‌ಟೈಲ್, ಗೌಜಿ ಗಮ್ಮತ್, ಗೋಸ್ಮಾರಿ ಫಾಮಿಲಿ, ಜೀಟಿಗೆ, ಕುರೆಪಟ್, ಗಂಟ್ ಕಲ್ವೆರ್, ಮೊದಲಾದ ಜನಪ್ರಿಯ ತುಳು ಚಲನಚಿತ್ರಗಳಲ್ಲಿ ಹಾಗೂ ಐ, ಶುಗರ್ ಲೆಸ್, ಅಪರಾಧಿ ನಾನಲ್ಲ, ಕನ್ನಡ ಚಲನಚಿತ್ರದಲ್ಲೂ ಮಾತ್ರವಲ್ಲದೆ ಮೂಗಜ್ಜನ ಕೋಳಿ ಎಂಬ ಅರೆಭಾಷೆ ಚಿತ್ರದಲ್ಲೂ ಕಾಣಿಸಿಕೊಂಡಿರುತ್ತಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…