ಉಡುಪಿ: ಬೆಂಗಳೂರಿನಿಂದ ಮಂಗಳೂರು, ಉಡುಪಿ ಮಾರ್ಗವಾಗಿ ಕಾರವಾರ, ಮಡಗಾಂವ್ ತಲುಪಲಿರುವ ಬಹುದಿನ ನಿರೀಕ್ಷಿತ ವಂದೇ ಭಾರತ್ ರೈಲಿಗೆ ನವೆಂಬರ್ ಮೂರನೇ ವಾರದಲ್ಲಿ ಮಂಗಳೂರಿನಲ್ಲಿ ಚಾಲನೆ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸಂಸದ ಕೋಟ ದೆಹಲಿಯಲ್ಲಿ ರೈಲ್ವೆ ಭವನದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ಸೋಮಣ್ಣ ಅವರನ್ನು ಭೇಟಿಯಾಗಿ ಮಂಗಳೂರು – ಮಡಗಾಂವ್ ವಂದೇ ಭಾರತ್ ರೈಲ್ವೆ ಮಂಜೂರು ಮಾಡಿರುವುದಕ್ಕೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.
ಕೊಂಕಣ ರೈಲ್ವೆ ಮಾರ್ಗ ದ್ವಿಪಥಗೊಳಿಸದಿರಲು ಮತ್ತು ಮಾರ್ಗದ ಎಲ್ಲಾ ರೈಲು ನಿಲ್ದಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡದಿರಲು ಮುಖ್ಯ ಕಾರಣ ಕೊಂಕಣ ರೈಲ್ವೆ ನಿಗಮದಲ್ಲಿ ಆರ್ಥಿಕ ಕೊರತೆಯಾಗಿದೆ. ಈ ಹಿನ್ನಲೆಯಲ್ಲಿ ಕೇರಳ, ಗೋವಾ, ಕರ್ನಾಟಕ, ಮಹಾರಾಷ್ಟ್ರ ಸರ್ಕಾರಗಳ ಜೊತೆ ಸಮನ್ವಯಗೊಳಿಸಿ ಕೊಂಕಣ ರೈಲ್ವೆ ಯನ್ನು ಭಾರತೀಯ ರೈಲ್ವೆಯೊಡನೆ ವಿಲೀನಗೊಳಿಸಲು ಕೇಂದ್ರ ಮಧ್ಯ ಪ್ರವೇಶಿಸಬೇಕು ಎಂದು ವಿನಂತಿಸಿದ್ದು, ಈ ಬಗ್ಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಸಹಕಾರ ನೀಡುವ ಬಗ್ಗೆ ಸಹಮತ ವ್ಯಕ್ತಪಡಿಸಿರುವುದನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ, ಇದಕ್ಕೆ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ ರೈಲ್ವೆ ಸಚಿವರಿಬ್ಬರು ವಿಲೀನದ ಬಗ್ಗೆ ವಿಶೇಷ ಗಮನಹರಿಸುವುದಾಗಿ ತಿಳಿಸಿದ್ದಾರೆ ಎಂದು ಕೋಟ ತಿಳಿಸಿದ್ದಾರೆ.
ಕಾಂಗ್ರೆಸ್ ಬ್ಯಾಂಕ್ ಗಳನ್ನು ನಿರ್ಮಿಸಿತು, ಬಿಜೆಪಿ ಅವುಗಳನ್ನು ಮಾರಾಟ ಮಾಡುತ್ತಿದೆ : : IDBI ಬ್ಯಾಂಕ್ ಖಾಸಗೀಕರಣದ ವಿರುದ್ಧ ರಾಹುಲ್…
ನ. 15ರೊಳಗೆ ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ ದಿನಾಂಕ ಘೋಷಿಸಿ: ಆರೋಗ್ಯ ಸಚಿವರಿಗೆ ಯಶ್ಪಾಲ್ ಸುವರ್ಣ ಒತ್ತಾಯ ಉಡುಪಿ: ಉಡುಪಿ ಜಿಲ್ಲೆಯ…
ಸೌಜನ್ಯ ಪ್ರಕರಣ: ಶಶಿಕುಮಾರ್ ಬದಲಿಗೆ ಚೇತನ್ ಸಿಂಗ್ ರಾಥೋಡ್ ಅವರನ್ನು ಎಸ್‌ಐಟಿ ಮುಖ್ಯಸ್ಥರಾಗಿ ನೇಮಕ ಮಂಗಳೂರು : ಸೌಜನ್ಯ ಅತ್ಯಾಚಾರ…
ಇಂದು ಪಿಎಂ ಕಿಸಾನ್ ಯೋಜನೆಯ 24ನೇ ಕಂತು ಬಿಡುಗಡೆ ನವದೆಹಲಿ: ದೇಶದ 9.34 ಕೋಟಿಗೂ ಅಧಿಕ ರೈತರಿಗೆ ಇಂದು ಪಿಎಂ…
ಉಡುಪಿ: ಸ್ವಯಂಪ್ರೇರಿತ ರಕ್ತದಾನ, ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸಿ ರಮೇಶ್ ಕಾಂಚನ್ ಹುಟ್ಟುಹಬ್ಬ ಆಚರಣೆ ರಮೇಶ್ ಕಾಂಚನ್ ಅವರು ಸಮಾಜಮುಖಿ…
ಉಡುಪಿ: ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ, ಕತ್ತಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಪ್ರಕರಣ; ಆರೋಪಿ ಬಂಧನ ಉಡುಪಿ: ಬಾಡಿಗೆ…