Featured

ಉಡುಪಿ : ನವ ಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದುದು : ಸಚಿವ ಸುನಿಲ್ ಕುಮಾರ್ -Vishwanews24

ಉಡುಪಿ : ನವ ಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದುದು : ಸಚಿವ ಸುನಿಲ್ ಕುಮಾರ್ -Vishwanews24

ಉಡುಪಿ : ವಿದ್ಯಾರ್ಥಿಗಳ ಮೂಲಕ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಗೆ ಶಿಕ್ಷಕರಿಗಿದ್ದು , ದೇಶದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ನವ ಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಉಡುಪಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ,ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇರ್ಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ,ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ, ಉಡುಪಿ ಇವರ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವಾತಂತ್ರ‍್ರö್ಯದ ಅಮೃತ ಮಹೋತ್ಸವದ ಈ ಸಮಯದಲ್ಲಿ ಸಹ , ಸ್ವಾತಂತ್ರö್ಯ ಪೂರ್ವದಲ್ಲಿನ ಹಲವು ಸಮಸ್ಯೆಗಳೊಂದಿಗೆ ,ಹಲವು ಹೊಸ ಸಮಸ್ಯೆಗಳೊಂದಿಗೆ ಸೃಷ್ಠಿಯಾಗಿವೆ. ಇವುಗಳನ್ನು ಪರಿಹಾರಕ್ಕೆ ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣದ ಸಾಕಾರ ಶಾಲೆಗಳಿಂದಲೇ ಆರಂಭವಾಗಬೇಕಿದೆ, ಈ ನಿಟ್ಟಿನಲ್ಲಿ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವ ಮೂಲಕ ಮಾಡುವ ಮೂಲಕ ನವ ಭಾರತ ನಿರ್ಮಾಣಕ್ಕೆ ಬದ್ದರಾಗಬೇಕು ಎಂದರು.

ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನುರೂಪಿಸಿದ್ದು, ಇದರಲ್ಲಿನ ಅಂಶಗಳ ಕುರಿತು ಶಿಕ್ಷಕರು ತಿಳಿದುಕೊಂಡು, ಅದನ್ನು ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸುವುದರಿAದ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದುದು. ಕೋವಿಡ್ ಸಂಕಷ್ಟದಲ್ಲಿಯೂ ಸಹ ಜಿಲ್ಲೆಯ ಶಿಕ್ಷಕರು ಜಿಲ್ಲಾಡಳಿದ ಸೂಚಿಸಿರುವ ಹೆಚ್ಚುವರಿ ಕರ್ತವ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಹಿಂದಿನ ಶಿಕ್ಷಕರು ಮತ್ತು ಈಗಿನ ಶಿಕ್ಷಕರು , ಶೈಕ್ಷಣಿಕ ಗುಣಮಟ್ಟವನ್ನು ಉಳಿಸಿ, ಬೆಳೆಸಿ, ಉತ್ತಮ ಸೇವೆ ಸಲ್ಲಿಸಿರುವ ಕಾರಣ ಜಿಲ್ಲೆಗೆ ರಾಜ್ಯದಲ್ಲಿ ಅತ್ಯುತ್ತಮ ಶೈಕ್ಷಣಿಕ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ ಎಂದರು.

“ ಬಿಂಬ” ವಾರ್ಷಿಕ ಸಂಚಿಕೆ ಮತ್ತು ಶಿಕ್ಷಕರ ಗುರುತಿನ ಚೀಟಿಯನ್ನು ಸಚಿವ ವಿ.ಸುನೀಲ್ ಕುಮಾರ್ ಬಿಡುಗಡೆ ಮಾಡಿದರು.

ಕಾಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ 17 ಮಂದಿ ಶಿಕ್ಷಕರು, 43 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರÀ ಹೆಗ್ಡೆ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪಸ್ಥಿತರಿದ್ದರು.

ಡಿಡಿಪಿಐ ಎನ್.ಹೆಚ್. ನಾಗೂರ್ ಸ್ವಾಗತಿಸಿದರು. ಉಡುಪಿ ಬಿಇಓ ನಾಗೇಂದ್ರಪ್ಪ ವಂದಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

3 days ago