Featured

ಉಡುಪಿ : ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ,ಉಡುಪಿಯ ಕುಲಪತಿ ಪಿ.ಬಿ ಆಚಾರ್ಯ ನಿಧನ – vishwanews24

ಉಡುಪಿ : ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ,ಉಡುಪಿಯ ಕುಲಪತಿ ಪಿ.ಬಿ ಆಚಾರ್ಯ ನಿಧನ

ಉಡುಪಿ : ನಾಗಾಲ್ಯಾಂಡ್‌ನ ಮಾಜಿ ಗವರ್ನರ್‌, ಉಡುಪಿಯ ಕುಲಪತಿ ಪಿಬಿ ಆಚಾರ್ಯ ಶುಕ್ರವಾರ ನ.10ರಂದು ನಿಧನರಾಗಿದ್ದಾರೆ.

ಪಿಬಿ ಆಚಾರ್ಯ ಎಂದೇ ಪ್ರಸಿದ್ದರಾಗಿದ್ದ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಬಿಜೆಪಿಗೆ ಸೇವೆ ಸಲ್ಲಿಸಿದ ಹಿರಿಯ ನಾಯಕರಾಗಿದ್ದರು. ಮಾರ್ಗರೆಟ್ ಆಳ್ವಾ ನಂತರ ರಾಜ್ಯಪಾಲ ಹುದ್ದೆಗೆ ಆಯ್ಕೆಯಾದ ಕರಾವಳಿ ಕರ್ನಾಟಕದ ಎರಡನೇ ಮತ್ತು ಜಿಎಸ್‌ಬಿ ಸಮುದಾಯದಿಂದ ಮೊದಲಿಗರು ಆಗಿದ್ದರು.

ಬಾಲಕೃಷ್ಣ ಮತ್ತು ರಾಧಾ ಆಚಾರ್ಯ ಅವರ ಪುತ್ರರಾಗಿದ್ದ ಪಿಬಿ ಆಚಾರ್ಯ, ಅವರು ಎಂ ಜಿ ಎಂ ಕಾಲೇಜಿನ ಪ್ರಥಮ ಬ್ಯಾಚ್‌ ನ ವಿದ್ಯಾರ್ಥಿಯಾಗಿದ್ದರು (1948-50). ಕಾಡಬೆಟ್ಟುವಿನಲ್ಲಿ ಆರ್‌ಎಸ್‌ಎಸ್ ವಿದ್ಯಾರಣ್ಯ ಘಟಕದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದ ಆಚಾರ್ಯ ಅವರು ಆರ್‌ಎಸ್‌ಎಸ್ ನಿಷೇಧವಾದ ಸಂದರ್ಭ 1948 ರಲ್ಲಿ ಆರು ತಿಂಗಳ ಕಾಲ ಜೈಲುವಾಸ ಅನುಭವಿಸಿದ್ದರು.

1995 ಮತ್ತು 2001 ರ ನಡುವೆ ನರೇಂದ್ರ ಮೋದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಪದ್ಮನಾಭ ಆಚಾರ್ಯ ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ರಾಜ್ಯಪಾಲರಾಗುವ ಮೊದಲು ಅವರು ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ನಾಗಾಲ್ಯಾಂಡ್, ತ್ರಿಪುರಾ, ಅಸ್ಸಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಮಣಿಪುರ ಮತ್ತು ಅರುಣಾಚಲ ಪ್ರದೇಶದ ಪ್ರಭಾರ ರಾಜ್ಯಪಾಲರಾಗಿಯೂ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

17 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

17 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

17 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

19 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

19 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

20 hours ago