ಉಡುಪಿ : ಮೀನುಗಾರಿಕೆಗೆಂದು ನಾಡದೋಣಿಯೊಂದಿಗೆ ಸಮುದ್ರಕ್ಕೆ ತೆರಳಿದ್ದ ಮೀನುಗಾರರು ಅಲೆಗಳ ರಭಸಕ್ಕೆ ನೀರುಪಾಲಾದ ದಾರುಣ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48), ಗಂಗೊಳ್ಳಿ ಬೇಲಿಕೆರಿ ನಿವಾಸಿ ರೋಹಿತ್ ಖಾರ್ವಿ (35), ಮಲ್ಯಾರುಬೆಟ್ಟು ನಿವಾಸಿ ಜಗದೀಶ್ ಖಾರ್ವಿ (50) ನೀರುಪಾಲಾದ ಮೀನುಗಾರರು.
ಮುಂಜಾನೆ ಸಿಪಾಯಿ ಸುರೇಶ್ ಮಾಲೀಕತ್ವದ ನಾಡದೋಣಿಯಲ್ಲಿ ನಾಲ್ವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಡಲು ಪ್ರಕ್ಷುಬ್ದಗೊಂಡ ಹಿನ್ನೆಲೆಯಲ್ಲಿ ಅಪಾಯದ ಮುನ್ಸೂಚನೆಯನ್ನರಿತ ಮೀನುಗಾರರು ದಡಕ್ಕೆ ವಾಪಾಸಾಗಲು ಪ್ರಯತ್ನಿಸುತ್ತಿದ್ದ ವೇಳೆಯೇ ನಾಡದೋಣಿ ಮಗುಚಿದೆ ಎನ್ನಲಾಗಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಆಯತಪ್ಪಿ ನೀರಿಗೆ ಬಿದ್ದಿದ್ದು, ಓರ್ವ ಮೀನುಗಾರ ಸಂತೋಷ ಎನ್ನುವವರು ಈಜಿ ಬೇರೆ ದೋಣಿ ತಲುಪಿ ಅಪಾಯದಿಂದ ಪಾರಾಗಿದ್ದಾರೆ. ನೀರುಪಾಲಾದ ಮೂವರು ಮೀನುಗಾರರಿಗಾಗಿ ಸಮುದ್ರದಲ್ಲಿ ಹುಡುಕಾಟ ಆರಂಭಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…