Featured

ಉಡುಪಿ : ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡಿ : ರಮೇಶ್ ಕಾಂಚನ್ ಆಗ್ರಹ – Vishwanews24

ಉಡುಪಿ : ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡಿ : ರಮೇಶ್ ಕಾಂಚನ್ ಆಗ್ರಹ

ಉಡುಪಿ: ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಕಳೆದ ಹತ್ತು ತಿಂಗಳಿನಿಂದ ಸೀಮೆಎಣ್ಣೆ ಬಿಡುಗಡೆಗೊಂಡಿಲ್ಲ. ಈಗಾಗಲೇ ನಾಡದೋಣಿ ಸಂಘದವರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ತಕ್ಷಣ ಸೀಮೆಎಣ್ಣೆ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ ಹೊರತಾಗಿಯೂ ಸರಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿರುವುದು ಖಂಡನಾರ್ಹವಾಗಿದೆ. ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಪ್ರತಿ ತಿಂಗಳು 300 ಲೀಟರ್ ಸೀಮೆಎಣ್ಣೆ ನೀಡುತ್ತಿತ್ತು. ಈಗ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ 5 ಶಾಸಕರು, ಒಬ್ಬ ಸಂಸದೆ ಇದ್ದರೂ ಕೂಡ ಮೀನುಗಾರರ ಪ್ರಾಮಾಣಿಕ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಉಸ್ತುವಾರಿ ಸಚಿವರಾಗಲಿ, ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳಾಗಿ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸದೇ ನಿರ್ಲಕ್ಷ್ಯ ಧೋರಣೆ ಮುಂದುವರಿಸಿರುವುದು ನಿಜಕ್ಕೂ ಖೇದಕರವಾಗಿದೆ.

ಸೀಮೆಎಣ್ಣೆ ಕೊರೆತೆಯಿಂದಾಗಿ ಮೀನುಗಾರರಿಗೆ ಮೀನುಗಾರಿಕೆ ನಡೆಸಲು ಕಷ್ಟಕರವಾಗುತ್ತಿದ್ದು ಇದರಿಂದಾಗಿ ಸಣ್ಣ ಮೀನುಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಆದ್ದರಿಂದ ಸರಕಾರವು ತಕ್ಷಣ ಮೀನುಗಾರರ ಈ ಸಮಸ್ಯೆಗೆ ಸ್ಪಂದಿಸಿ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ.

1. ಸರಕಾರ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಹದಿನೈದು ದಿನದೊಳಗೆ ಸೀಮೆ ಎಣ್ಣೆ ಪೂರೈಸಬೇಕು.

2. ಸೀಮೆಎಣ್ಣೆ ಬಿಡುಗಡೆ ಮಾಡಿದ ನಂತರ ಅದನ್ನು ಸಮರ್ಪಕವಾಗಿ ಹಂಚಿಕೆಯಾಗಲು ವ್ಯವಸ್ಥೆಯಲ್ಲಿರುವ ಲೋಪವನ್ನು ಸರಿ ಪಡಿಸಿ ಮೀನುಗಾರರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು.

3. ಕರಾವಳಿ ಕರ್ನಾಟಕದ ಮೂರು ಜಿಲ್ಲೆಯ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಸೀಮೆಎಣ್ಣೆ ವಿತರಣೆಯ ವಿಳಂಬದಲ್ಲಾದ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಬೇಕು‌.

4. ಮೀನುಗಾರರಿಗೆ ಮನೆ ಕಟ್ಟಲು ಸರಕಾರ ನೀಡುವ ಅನುದಾನದಲ್ಲೂ ವಿಳಂಬ ಧೋರಣೆ ಮುಂದುವರಿಸಿದ್ದು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ

ಹತ್ತು ದಿನದೊಳಗೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರೊಂದಿಗೆ ಸೇರಿ‌ ಬೃಹತ್ ಹೋರಾಟ ನಡೆಸುವ ಎಚ್ಚರಿಕೆಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago