ಉಡುಪಿ: 2022-23 ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472 ಕೆಎಲ್ ಮತ್ತು 3000 ಕೆಎಲ್. ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಇಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆ ಗಿಂತಲೂ ಹೆಚ್ಚುವರಿಯಾಗಿ 2500 ಕೆ.ಎಲ್. ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ 2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆ.ಎಲ್.+2500ಕೆ.ಎಲ್.) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದಕರಾವಳಿ ಮೀನುಗಾರರು ಕೇಂದ್ರ ದಿಂದ ಪಡೆದಿದ್ದಾರೆ.
ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿಯಲ್ಲಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ, ಮೀನುಗಾರಿಕೆಯನ್ನ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಶೋಭಾ ಕರಂದ್ಲಾಜೆಯವರು ಮನಿ ಮಾಡಿದ್ದರು. ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವರಾದ ಶ್ರೀ ಹರದೀಪ್ ಸಿಂಗ್ ಮುರಿಯವರು ಮನವಿಗೆ ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ. ಹರದೀಪ ಸಿಂಗ್ ಪುರಿಯವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಕರಾವಳಿ ಪ್ರದೇಶದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದಗಳನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…