ಉಡುಪಿ

ಉಡುಪಿ : ನಾನು ಈ ಬಾರಿ ಪಾರ್ಲಿಮೆಂಟ್ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ – vishwanews24

ಉಡುಪಿ : ನಾನು ಈ ಬಾರಿ ಪಾರ್ಲಿಮೆಂಟ್ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ

32 ವರ್ಷಗಳಿಂದ ನಿರಂತರ ಪಕ್ಷದ ಚಟುವಟಿಕೆ‌ ಆದರೆ ಚುನಾವಣೆ ಸ್ಪರ್ದಿಸಿಲ್ಲ

ಈ ಬಾರಿ ಅವಕಾಶ ನೀಡುವಂತೆ ವರಿಷ್ಠರಿಗೆ ಮನವರಿಕೆ

ಉಡುಪಿ: ಕಳೆದ 32 ವರ್ಷಗಳಿಂದ ನಿರಂತರವಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೂತ್ ಮಟ್ಟದಿಂದ ಜಿಲ್ಲಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪಕ್ಷದಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದರೂ, ಯಾವುದೇ ಹಂತದ ಚುನಾವಣೆಗಳಿಗೆ ಸ್ಪರ್ಧಿಸಲು ಅವಕಾಶ ದೊರೆತಿರುವುದಿಲ್ಲ. ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಪಕ್ಷದ ಕಷ್ಟದ ಕಾಲದಲ್ಲೂ ಮತ್ತು ಎಲ್ಲಾ ಹಂತಗಳಲ್ಲೂ ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ನನಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಈಗಾಗಲೇ ಪಕ್ಷದ ವರಿಷ್ಠರಲ್ಲಿ ಆಗ್ರಹವನ್ನು ವ್ಯಕ್ತಪಡಿಸಿದ್ದೇನೆ.

ಕರಾವಳಿ ಹಿಂದುತ್ವದ ಭದ್ರಕೋಟೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಕಾರ್ಯಕರ್ತರ ಅವಿರತ ಶ್ರಮದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಐದೂ ಕ್ಷೇತ್ರಗಳನ್ನು ಭರ್ಜರಿಯಾಗಿ ಗೆಲ್ಲುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲೇ ಅದ್ವಿತೀಯ ಸಾಧನೆ ಮಾಡಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago