Featured

ಉಡುಪಿ: ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ : ಪ್ರಮೋದ್ ಮಧ್ವರಾಜ್ – vishwanews24

ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ..

ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು ನಿಲ್ಲಿಸುವುದಿಲ್ಲ :ಪ್ರಮೋದ್ ಮಧ್ವರಾಜ್

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಹರಿದಾಡುತ್ತಿರುವ ಕೆಲವು ಸುದ್ದಿಗಳು ಮತ್ತು ಊಹಾಪೋಹಗಳು ನನ್ನ ಗಮನಕ್ಕೆ ಬಂದಿವೆ. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.

ನಾನು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ, ಜನಸೇವೆಯ ಉದ್ದೇಶದಿಂದ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ಆದರೆ ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಿದೆ.

ನಾನು ಯಾವುದೇ ಅಧಿಕಾರ ಅಥವಾ ಹುದ್ದೆಗಾಗಿ ಪರಿತಪಿಸುತ್ತಿಲ್ಲ. ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ; ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ ಎಂಬ ನಂಬಿಕೆ ನನ್ನದು. ನನಗೆ ಅಧಿಕಾರ ಸಿಕ್ಕರೆ ಅದು ಕೇವಲ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ನನ್ನ ಪಾಲಿಗೆ ಗೌರವ ಅಥವಾ ಸ್ಥಾನಮಾನವಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಜವಾಬ್ದಾರಿಯಾಗಿದೆ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಜವಾಬ್ದಾರಿ ಸಿಗದಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ನಾಯಕರುಗಳು ನನ್ನ ಕಾರ್ಯ, ಪಕ್ಷದ ಮೇಲಿನ ನಿಷ್ಠೆ ಹಾಗೂ ಜನಸೇವೆಯ ಬದ್ಧತೆಯನ್ನು ಖಂಡಿತವಾಗಿಯೂ ಗುರುತಿಸಿ ಸೂಕ್ತ ಹಾಗೂ ಉತ್ತಮ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ನನ್ನ ರಾಜಕೀಯ ಪಯಣದಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡುತ್ತಿರುವ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನತೆಗೆ ನಾನು ಸದಾ ಚಿರಋಣಿಯಾಗಿದ್ದೇನೆ. ಅವರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಮತ್ತಷ್ಟು ಶಕ್ತಿಯನ್ನು ನೀಡುತ್ತಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಮತ್ತು ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ.

“ಅಧಿಕಾರ ನನ್ನ ಗುರಿಯಲ್ಲ ಜನಸೇವೆಯೇ ನನ್ನ ಧೈಯ. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು ನಿಲ್ಲಿಸುವುದಿಲ್ಲ.”- ಪ್ರಮೋದ್ ಮಧ್ವರಾಜ್

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago