Featured

ಉಡುಪಿ: ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ಸಿಗೆ ಅತಿ ಹೆಚ್ಚು ಮತ ಬೀಳುವಂತೆ ಮಾಡುತ್ತೇನೆ : ಸುಕುಮಾರ್ ಶೆಟ್ಟಿ – Vishwanews24

ಉಡುಪಿ: ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ಸಿಗೆ ಅತಿ ಹೆಚ್ಚು ಮತ ಬೀಳುವಂತೆ ಮಾಡುತ್ತೇನೆ : ಸುಕುಮಾರ್ ಶೆಟ್ಟಿ

ಬೈಂದೂರಿನಲ್ಲಿ ಬಿಜೆಪಿಗೆ 14 ಸಾವಿರಕ್ಕಿಂತ ಹೆಚ್ಚು ಮತ ಸಿಗುವುದಿಲ್ಲ

ಉಡುಪಿ,: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಇದೀಗ ಎರಡೆರಡು ಬಂಡಾಯದ ಬಿಸಿಯನ್ನು ಅನುಭವಿಸುತ್ತಿದೆ. ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಶಿವಮೊಗ್ಗದಲ್ಲಿ ಹಳೆಹುಲಿ ಕೆ.ಎಸ್.ಈಶ್ವರಪ್ಪ ಹಾಗೂ ಬೈಂದೂರಿ ನಲ್ಲಿ ಬಿ.ಎಂ.ಸುಕುಮಾರ್ ಶೆಟ್ಟಿ ಅವರು ಬಿಸಿ ತುಪ್ಪವಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕಕೆ ಸೇರಿರುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈಗ ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಇತ್ತೀಚೆಗೆ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ತನ್ನ ರಾಜಕೀಯ ಗುರು ಬಿ.ಎಸ್.ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ.

 

ಬೆಂಗಳೂರಿನಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ಬಿ.ಎಂ.ಸುಕುಮಾರ್ ಶೆಟ್ಟಿ ಇದೀಗ ಮಾಧ್ಯಮಗಳಿಗೆ ಹೇಳಿಕೆ ಯೊಂದನ್ನು ನೀಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೈಂದೂರು ಕ್ಷೇತ್ರದಲ್ಲಿ ಭಾಗ ಮುನ್ನಡೆ ದೊರಕಿಸಿ ಕೊಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಗೆ ಭಾರಿ ಮುನ್ನಡೆ ನೀಡಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದಿಂದಾಗಿ ರಾಘವೇಂದ್ರ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎರಡು ಚುನಾವಣೆಯಲ್ಲಿ ಬಿಜೆಪಿಗೆ ಬೈಂದೂರಿನಲ್ಲಿ 14 ಸಾವಿರ ಲೀಡ್ ಇತ್ತು. ಆದರೆ ಕಳೆದ ಬಾರಿ ಇದು 75 ಸಾವಿರಕ್ಕೇರಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಈ ಬಾರಿ ಬೈಂದೂರಿನಲ್ಲಿ ಬಿಜೆಪಿಗೆ 14 ಸಾವಿರಕ್ಕಿಂತ ಹೆಚ್ಚು ಮತ ಸಿಗುವುದಿಲ್ಲ. ಬಿಜೆಪಿ ಪ್ರಾಮಾಣಿಕವಾಗಿ ದುಡಿ ದವರನ್ನು ಗುರುತಿಸಿಲ್ಲ. ಪ್ರಾಮಾಣಿಕರು ಪಕ್ಷ ಬಿಟ್ಟು ಹೊರಗೆ ಹೋಗುವಂತಾಗಿದೆ. ಚುನಾವಣೆ ನಡೆದು 9 ತಿಂಗಳಾದರೂ ನನ್ನನ್ನು ಯಾರು ಮಾತನಾಡಿಸಿಲ್ಲ. ಆದರೆ ಕಾಂಗ್ರೆಸ್‌ನವರು ನನ್ನನ್ನು ಆಹ್ವಾನಿಸಿದರು. ನಾನು ಕಾಂಗ್ರೆಸ್ ಸೇರ್ಪಡೆಯಾ ಗಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ಸಿಗೆ ಅತಿ ಹೆಚ್ಚು ಮತ ಬೀಳುವಂತೆ ಮಾಡುತ್ತೇನೆ ಎಂದವರು ಭರವಸೆ ನೀಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಹೋರಾಟ ಇದೆ. ಈಶ್ವರಪ್ಪ ಬಿಜೆಪಿ ಪಕ್ಷ ಕಟ್ಟಿದ ನಾಯಕ. ಅವರಿಗೂ ಬೇಸರವಾಗಿದೆ. ಈಶ್ವರಪ್ಪ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ಈಶ್ವರಪ್ಪ ಹಿಂದುತ್ವದ ಮತ ಪಡೆದರೆ ರಾಘವೇಂದ್ರ ಮೂರನೇ ಸ್ಥಾನಕ್ಕೆ ಹೋಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸುಕುಮಾರ್ ಶೆಟ್ಟಿ, ಈ ದಿಸೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಗಲೇ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago