Featured

ಉಡುಪಿ : ನಾನು ದಿವಾಳಿಯಾಗಿಲ್ಲ ಯಾರಿಗೂ ವಂಚನೆ ಮಾಡಿಲ್ಲ ; ಐ ವಿಲ್ ಕಮ್ ಬ್ಯಾಕ್ ಅಗೈನ್ : ಉದ್ಯಮಿ ಬಿ.ಆರ್‌. ಶೆಟ್ಟಿ -Vishwanews24

ಉಡುಪಿ : ನಾನು ದಿವಾಳಿಯಾಗಿಲ್ಲ ಯಾರಿಗೂ ವಂಚನೆ ಮಾಡಿಲ್ಲ ; ಐ ವಿಲ್ ಕಮ್ ಬ್ಯಾಕ್ ಅಗೈನ್ : ಉದ್ಯಮಿ ಬಿ.ಆರ್‌. ಶೆಟ್ಟಿ -Vishwanews24

ಉಡುಪಿ : ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ಎನ್‌ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್‌ನ ಕೋರ್ಟ್‌ ಆದೇಶ ನೀಡಿದ ನಂತರ ಮೊದಲ ಬಾರಿಗೆ ಬಿ.ಆರ್ ಶೆಟ್ಟಿ ಮಾಧ್ಯಮಗಳ ಮುಂದೆ ಬಂದಿದ್ದು, ಜನರ ಆಶಿರ್ವಾದದಿಂದ ನಾನು ಎಲ್ಲಾ ಸಮಸ್ಯೆಗಳಿಂದ ಹೊರ ಬರುತ್ತೆನೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವ್ಯವಹಾರದಲ್ಲಿ ನಾನು ಕೆಲವು ಜನರನ್ನು ನಂಬಿ ಮೋಸ ಹೋಗಿದ್ದು, ನನ್ನ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಸೇರಿದ ಒಬ್ಬನನ್ನು ನತರ ಸಿ ಎಫ್ ಓ ಮಾಡಿದೆ ಆದರೆ ಅವನೇ ನನ್ನ ಬೆನ್ನಿಗೆ ಚೂರಿ ಹಾಕಿದ್ದ ನನ್ನ ಆರ್ಥಿಕ ಸಂಕಷ್ಟಕ್ಕೆ ಅವನೇ ಕಾರಣ ಎಂದು ಹೇಳಲಾರೆ ಏಕೆಂದರೆ ಆರೋಪ ಇನ್ನೂ ಸಾಬೀತಾಗಿಲ್ಲ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ ಹಾಗಾಗಿ ಹೆಚ್ಚೇನು ಹೇಳಲಾರೆ ಎಂದರು.

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ನಾನು ಯಾರಿಗೂ ವಂಚನೆ ಮಾಡಿಲ್ಲ ಎಂಬ ಆತ್ಮವಿಶ್ವಾಸವಿದೆ. ನಾನು ಉಡುಪಿಯಲ್ಲಿದ್ದಾಗ ನನ್ನ ಕಿಸೆಯಲ್ಲಿ ಒಂದು ರೂಪಾಯಿ ದುಡ್ಡು ಇರುತ್ತಿರಲಿಲ್ಲ, ಸಾಲಮಾಡಿ ಬೈಕಿಗೆ ಪೆಟ್ರೋಲ್ ಹಾಕಿ ಓಡಾಡುತ್ತಿದ್ದೆ, ಯಾರಿಂದ ಸಾಲ ಪಡೆದಿದ್ದೇನೆ ಎಲ್ಲವನ್ನೂ ವಾಪಾಸು ಮಾಡಿದ್ದೇನೆ ಐ ವಿಲ್ ಕಮ್ ಬ್ಯಾಕ್ ಅಗೈನ್. ನಾನು ಕಷ್ಟಪಟ್ಟು ದುಡಿದ ಹಣವನ್ನು ಮರು ಗಳಿಸುತ್ತೇನೆ ನನ್ನ ಟ್ರಸ್ಟ್ ಮೂಲಕ ನಡೆಯುತ್ತಿರುವ ಎಲ್ಲಾ ಉಚಿತ ಸಮಾಜ ಸೇವೆಗಳನ್ನು ಮುಂದುವರಿಸುತ್ತೇನೆ. ನನ್ನ ಆಸ್ತಿಯ ಅರ್ಧಭಾಗವನ್ನು ಮಿಲಿಂದಾ ಗೇಟ್ ಫೌಂಡೇಶನ್ ಗೆ ದಾನ ಮಾಡಿದ್ದೇನೆ. ಪಾರ್ಕಿನ್ಸನ್ ಅಮ್ನೇಶಿಯಾ ಮೊದಲಾದ ಕಾಯಿಲೆಗಳ ಬಗ್ಗೆ ಈ ಸಂಸ್ಥೆ ಅಧ್ಯಯನ ನಡೆಸುತ್ತಿದೆ.

ಈಗ ನನಗೆ ಗ್ರಹಚಾರ ಬಂದಿದೆ ಏನು ಮಾಡಲು ಸಾಧ್ಯ ? ಬಿಆರ್ ಶೆಟ್ಟಿ ಸಾಮ್ರಾಜ್ಯ ಮುಳುಗಿಹೋಯಿತು ಎಂಬ ಸುದ್ದಿಗಳನ್ನು ನೋಡಿ ಬೇಸತ್ತು ಹೋಗಿದ್ದೇನೆ. ದೇವರ ದಯೆಯಿಂದ ನನ್ನ ಆರ್ಥಿಕ ಪರಿಸ್ಥಿತಿ ಅಷ್ಟೇನೂ ಹದಗೆಟ್ಟಿಲ್ಲ. ನೀವು ಯಾರು ಊಹಿಸಿರದಷ್ಟು ಬಿ ಆರ್ ಶೆಟ್ಟಿ ಆರ್ಥಿಕವಾಗಿ ಸಕ್ಷಮ ವಾಗಿದ್ದಾರೆ. ಹೊರದೇಶದಲ್ಲಿರುವ ನನ್ನ ಸಾಮ್ರಾಜ್ಯ ಹೋಗಿರಬಹುದು. ಆದರೆ ಭಾರತದ ಆಸ್ತಿ ಸುರಕ್ಷಿತವಾಗಿದೆ ಎಂದರು. ಇನ್ನು ಪ್ರಧಾನಿ ನರೇಂದ್ರ ಮೋದಿ ನನಗೆ ಆತ್ಮೀಯರು ಆದರೆ ಅವರಿಂದ ನೆರವು ಯಾಚಿಸಿಲ್ಲ, ನಾನು ಪ್ರಧಾನಿ ಅವರ ಜೊತೆ ಮಾತನಾಡಲು ಹೋದರೆ ರಾಹುಲ್ ಗಾಂಧಿಗೆ ಮಾತನಾಡಲು ವಿಷಯ ಸಿಗುತ್ತದೆ. ನೀರವ್ ಮೋದಿ ವಿಜಯ್ ಮಲ್ಯ ಆಯ್ತು ಈಗ ಬಿಆರ್ ಶೆಟ್ಟಿಯೂ ದಿವಾಳಿ ಎನ್ನಬಹುದು, ಸದ್ಯ ನಾನು ಯಾವ ಬಿಜೆಪಿಯ ಮುಖಂಡರನ್ನು ನಾನು ಮಾತನಾಡಿಸಲು ಹೋಗಿಲ್ಲ.

ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸಬಾರದು : ಪೇಜಾವರ ಶ್ರೀ -Vishwanews24

2012ರಲ್ಲಿ ನನಗೆ 12.8 ಬಿಲಿಯನ್ ಡಾಲರ್ ಮಾರ್ಕೆಟ್ ಕ್ಯಾಪಿಟಲ್ ಇತ್ತು 2017ರಿಂದ ನಾನು ನ್ಯೂ ಮೆಡಿಕಲ್ ಸಂಸ್ಥೆಯಿಂದ ಹೊರ ಬಂದೆ ನಂತರ 2019ರಲ್ಲಿ ನನ್ನ ಎಲ್ಲಾ ಸಾಮ್ರಾಜ್ಯ ಕುಸಿದು ಹೋಯಿತು. ಲಕ್ಷ್ಮೀ ಚಂಚಲೆ ಏನೂ ಮಾಡಲು ಸಾಧ್ಯವಿಲ್ಲ ಸರಸ್ವತಿ ಮಾತ್ರ ಸ್ಥಿರವಾಗಿ ಇರುತ್ತಾಳೆ ಎಂದರು.

ಇನ್ನು ಮಾಧ್ಯಮಗಳಲ್ಲಿ ಬಿ.ಆರ್ ಶೆಟ್ಟಿಯವರ ಕಣ್ಣೀರು ಸುರಿಸುತ್ತಿರುವ ಪೋಟೋ ಕುರಿತಂತೆ ಪ್ರತಿಕ್ರಿಯಿಸಿದ ಅವರು ನಾನು ಯಾವತ್ತೋ ಆನಂದಬಾಷ್ಪ ಸುರಿಸಿದ ಚಿತ್ರವನ್ನು ಮಾಧ್ಯಮಗಳು ಕಣ್ಣೀರು ಎಂದು ಬಿಂಬಿಸಿದವು ಎಂದು ಆರೋಪಿಸಿದ ಅವರು,.. ಶೆಟ್ಟಿಯ ಸಾಮ್ರಾಜ್ಯ ಉರುಳಿ ಬಿದ್ದಿದೆ ಎಂದು ಅವರು ಕೂಡ ಪತ್ರಿಕೆಗಳಲ್ಲಿ ಬಂದಿದೆ. ಆದರೆ ನನ್ನ ಮುಂದೆ ಎಂಬತ್ತನಾಲ್ಕು ಬ್ಯಾಂಕುಗಳು ಸಾಲ ಕೊಡಲು ಕ್ಯೂ ನಿಂತಿದ್ದವು, ಈಗ ಏನೇನೋ ಮಾತನಾಡುತ್ತಿದ್ದಾರೆ. ಆದರೂ ನಾನು ಧೃತಿಗೆಡುವುದಿಲ್ಲ ಮತ್ತೆ ಎದ್ದು ಬರುತ್ತೇನೆ ಎಂದರು.

ಹೊನ್ನಾವರ : ರಸ್ತೆ ಅಪಘಾತ ; ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಗಾಯ -Vishwanews24

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

14 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

17 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago