ಉಡುಪಿ : ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.
ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…