ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್‌ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಫಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ಘಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…