ಉಡುಪಿ : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸದೇ ಇರುವುದು ಪರಿಶೀಲನೆ ವೇಳೆಕಂಡುಬ0ದಿದ್ದು, ನಿಯಮವನ್ನು ಪಾಲಿಸದೇ ಇರುವ ಸಂಘ, ಸಂಸ್ಥೆ ಹಾಗೂ ಘಟಕಗಳಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನ್ವಯ ಮೊದಲನೇಯ ಅಪರಾಧಕ್ಕಾಗಿ 5000 ರೂ. ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆ, ಎರಡನೇಯ ಅಪರಾಧಕ್ಕಾಗಿ ರೂ. 10000 ರೂ. ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ಹಾಗೂ ನಂತರದ ಪ್ರತಿಯೊಂದು ಅಪರಾಧಕ್ಕಾಗಿ 20000 ರೂ. ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ವಿಧಿಸುವುದರೊಂದಿಗೆ ಪರವಾನಿಗೆಯನ್ನು ಸಹ ರದ್ದುಗೊಳಿಸಬಹುದಾಗಿರುತ್ತದೆ.
ಆದ್ದರಿಂದ ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಸಂಘ, ಸಂಸ್ಥೆ ಹಾಗೂ ಘಟಕದ ಹೆಸರು ಮತ್ತು ವಿಳಾಸವನ್ನು ಕನ್ನಡಭಾಷೆಯಲ್ಲಿ ಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವ ಮೂಲಕ ಪರಿಷ್ಕೃತ ಫಲಕವನ್ನು ಆಗಸ್ಟ್ 30 ರ ರೊಳಗಾಗಿ ಅಳವಡಿಸಬೇಕು. ನಂತರದ ದಿನಗಳಲ್ಲಿ ತಪಾಸಣೆ ಸಂದರ್ಭದಲ್ಲಿ ನಾಮಫಲಕದಲ್ಲಿ ವ್ಯತ್ಯಾಸ ಕಂಡುಬ0ದಲ್ಲಿ ಮೇಲೆ ವಿವರಿಸಿರುವ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…