ಉಡುಪಿ: ನಗರಸಭೆ ಯಿಂದ ಕಾನೂನುಬದ್ಧವಾಗಿ ನಿರ್ಮಾಣಗೊಂಡಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ತೆರವುಗೊಳಿಸಿ ಪಾಳುಬಿದ್ದರುವ ಜಾಗದ ಪೊದೆಗಳ ಮಧ್ಯೆ ಬಿಸಾಡಿರುವುದು ಅತ್ಯಂತ ಖಂಡನೀಯ. ಶೋಷಿತ ವರ್ಗದವರಿಗೆ ಗೌರವಯುತ ಬದುಕಿನ ದಾರಿ ತೋರಿದ ಮಾರ್ಗದರ್ಶಿ,ಮಹಾನ್ ದಾರ್ಶನಿಕರಾದ ಶ್ರೀ ನಾರಾಯಣ ಗುರುಗಳಿಗೆ ಅಗೌರವ ತೋರಿದ ತಪ್ಪಿತಸ್ಥರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
ಹಾಗೆಯೇ ನಾರಾಯಣ ಗುರುಗಳ ವೃತವನ್ನು ತೆರವುಗೊಳಿಸಿರುವುದರ ವಿರುದ್ಧ ಬಿಲ್ಲವ ಯುವ ವೇದಿಕೆಯವರು,ಬಿಲ್ಲವ ಸಮುದಾಯದ ಮುಂದಾಳುಗಳು, ಒಗ್ಗಟ್ಟಾಗಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿ ನಾರಾಯಣ ಗುರು ವೃತ್ತವನ್ನು ಮರು ಸ್ಥಾಪಿಸುವ ತನಕ ಸಂಘಟಿತ ಹೋರಾಟವನ್ನು ನಡೆಸಿರುವುದು ಬಹಳ ಶ್ಲಾಘನೀಯ.
2014ರಸಾಲಿನಲ್ಲಿ ಉಡುಪಿ ನಗರಸಭೆಯ ಅಂದಿನ ಅಧ್ಯಕ್ಷರಾದ ಯುವರಾಜ್ ಪುತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬನ್ನಂಜೆಯಲ್ಲಿ ನಾರಾಯಣ ಗುರು ವೃತ್ತ ನಿರ್ಮಿಸಲು ಸರ್ವಾನುಮತದಿಂದ ಅನುಮೋದನೆ ನೀಡಲಾಗಿತ್ತು.
ಹೀಗೆ ನಾರಾಯಣ ಗುರುಗಳ ವಿಚಾರದಲ್ಲಿ ಬಿಲ್ಲವ ಯುವ ವೇದಿಕೆ,ಬಿಲ್ಲವ ಸಮುದಾಯದ ಮುಂದಾಳುಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳು ಕೈ ಗೊಳ್ಳುವ ಕೆಲಸ ಕಾರ್ಯಗಳಿಗೆ ಮನಃಪೂರ್ವಕವಾಗಿ ಸಹಕರಿಸುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…