ಉಡುಪಿ, : ಗಣರಾಜ್ಯೋತ್ಸವ ಪರೇಡಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ ಅಗೌರವ ತೋರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ಜನರ ಮನಸ್ಸಿಗೆ ನೋವುಂಟು ಮಾಡಿ ರುವ ಕೇಂದ್ರ ಸರಕಾರವು ನಿಲುವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಬಿಲ್ಲವ ಸಂಘ/ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಉಡುಪಿ ಜಿಲ್ಲಾಧಿಕಾರಿ ಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಹಾಗೂ ಹಿರಿಯಡ್ಕ ಬಿಲ್ಲವ ಸಂಘದ ಅಧ್ಯಕ್ಷ ಮಲ್ಪೆ ರಾಘವೇಂದ್ರ ಮಾಸ್ಟರ್ ಮತ್ತು ಬೆಳ್ಮಣ್ ಬಿಲ್ಲವ ಸಂಘದ ಅಧ್ಯಕ್ಷ ಎಸ್.ಕೆ.ಸಾಲ್ಯಾನ್, ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಉಪಾಧ್ಯಕ್ಷ ಶ್ರೀಕರ ಅಂಚನ್, ಪ್ರಧಾನ ಕಾರ್ಯದರ್ಶಿ ಶಿವಾನಂದ ಹಾಗೂ ನಾರಾಯಣ ಗುರು ಯುವ ವೇದಿಕೆ ಹಾಗೂ ಯುವ ವಾಹಿನಿ ಘಟಕದ ಅಧ್ಯಕ್ಷರುಗಳು ಮತ್ತು 34 ಬಿಲ್ಲವ ಸಂಘಟನೆಗಳ ಅಧ್ಯಕ್ಷರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…