ಉಡುಪಿ : ನೇಜಾರು ತೃಪ್ತಿ ನಗರದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಮತ್ತು ಅಯ್ನಾ ಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.
ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ತನಿಖೆಗೆ ಬೇ ಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು.
ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಅಯ್ನಾಝ್ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಜಿಗುಪ್ಟೆಯಿಂದ ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಎಂದು ಮಾಹಿತಿ ನೀಡಿದರು.
ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದು, ಪ್ರವೀಣ್ ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲ. 2007 ಪೂನಾ ಪೊಲೀಸ್ ಆಗಿದ್ದ, ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದಾನೋ ಎಂಬ ಬಗ್ಗೆ ಮೆಡಿಕಲ್ ವರದಿ ಬರಲಿದೆ ಎಂದರು.
ಪ್ರವೀಣ್ ಆರಂಭದಲ್ಲಿ ಅಯ್ನಾಝ್ ಗೆ ಮೊದಲು ದಾಳಿ ಮಾಡಿ, ಬಳಿಕ ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ಪರಾರಿಯಾಗಿದ್ದಾನೆ. ಆರೋಪಿ ಕೈಗೆ ಗಾಯಕ್ಕೆ ಚಿಕಿತ್ಸೆ ಪಡೆದು ಚಾಕುವನ್ನು ಮನೆಯಲ್ಲಿ ಇಟ್ಟು ಹೆಂಡತಿ ತವರು ಮನೆಗೆ ಹೋಗಿದ್ದಾನೆ.ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇ ವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯಲಾಗುವುದು. ಆರೋಪಿಗೆ ಪ್ರತ್ಯೇ ಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ
ಆಗಿದೆ. ಗಂಭೀರ ಪ್ರಕರಣವಾಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.
ಹಸೀನಾ ಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇ ವೆ. ಅಯ್ನಾಝ್ ಕುಟುಂಬ ಫ್ಯಾಮಿಲಿ ತನಿಖೆಗೆ ಬಹಳ ಸಹಕಾರ ಕೊಟ್ಟಿದ್ದಾರೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತವೆ. ಫಾಸ್ಟ್ ಟ್ರ್ಯಾ ಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ ಎಂದರು.
ತನಿಖೆಗೆ ಒಟ್ಟು 11 ತಂಡ ರಚನೆ ಮಾಡಲಾಯಿತು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು.ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇ ವೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ಕೊಡುವ ಬಗ್ಗೆ ಶಿಫಾರಸ್ಸು ಮಾಡಿದ್ದೇನೆ ಎಂದು ಎಸ್ಪಿ ಅರುಣ್ ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…