Featured

ಉಡುಪಿ: ನಾಳೆ(ಜೂ.18) ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ವರೆಗೆ ವಾರಾಂತ್ಯದ ಕರ್ಪ್ಯೂ ಜಾರಿ -Vishwanews24

ಉಡುಪಿ: ನಾಳೆ(ಜೂ.18) ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ವರೆಗೆ ವಾರಾಂತ್ಯದ ಕರ್ಪ್ಯೂ ಜಾರಿ -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ವಾರಾಂತ್ಯ ಲಾಕ್ ಡೌನ್ ಜಾರಿ ಮಾಡಿ ಜೂ.12 ರಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

ಅದರಂತೆ ಶುಕ್ರವಾರ (ಜೂ.18) ರಾತ್ರಿ 7.00 ಗಂಟೆಯಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ.

ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗೆ 6 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆರೋಗ್ಯ ತುರ್ತು ಸಂದರ್ಭದಲ್ಲಿ ರೋಗಿಗಳು ಮತ್ತು ಅವರ ಪರಿಚಾರಕರು/ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಆರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿಗಳಿಗೆ ಕಾರ್ಯನಿರ್ವಹಿಸಲು ಅವಕಾಶವಿದ್ದು, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಸ್ವತಂತ್ರ ಮಧ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 2 ರ ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ.

ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸು ಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ. ಇದರೊಂದಿಗೆ ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣಗಳಿಗೆ ಅನುಮತಿಸಲಾಗಿದ್ದು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಕ್ಕೆ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದೆ.ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು, ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಹಾಗೂ ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಈಗಾಗಲೇ ನಿಗದಿಯಾಗಿರುವ ಮದುವೆ ಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ನಡೆಸಲು ಅನುಮತಿಸಲಾಗಿದೆ ಹಾಗೂ ಶವಸಂಸ್ಕಾರ ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ನಡೆಸಲು ಅನುಮತಿಸಲಾಗಿದೆ.

ಇನ್ನು ಉಳಿದಂತೆ ವಾರಾಂತ್ಯ ಕರ್ಫ್ಯೂ ‌ಅವಧಿಯಲ್ಲಿ ಎಲ್ಲಾ ರಾಜ್ಯ, ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID-19 ಕಂಟೈನ್ಮೆಂಟ್ ಮತ್ತು ಮ್ಯಾನೇಜ ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇಂತಹ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.

24/7 ಸಮಯಾವಧಿಯಲ್ಲಿ ಕಾರ್ಯಚರಿಸುವ ತುರ್ತು ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ಎಲ್ಲಾ ಕೈಗಾರಿಕೆಗಳು , ಕಂಪನಿಗಳು , ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ ಸಂಸ್ಥೆ ನೀಡುವ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು ಎಂದು ತಿಳಿಸಲಾಗಿದೆ. ಹಾಗೂ ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿ ಯೊಂದಿಗೆ ಸಂಚರಿಸಬಹುದಾಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ / ಸಂಸ್ಥೆ (IT and ITeS companies organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿ ಸುವುದು ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.

ಇದರೊಂದಿಗೆ ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

5 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

11 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

11 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

12 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

14 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

14 hours ago