ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಲಾದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ (ನ.10) ಸಂಜೆ 6ಗಂಟೆಗೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಮ್‌ನಲ್ಲಿ ನಡೆಯಲಿದೆ.
ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಶರ್ಫುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯೆನೆಪೋಯ ವಿವಿ ಕುಲಪತಿ ಅಬ್ದುಲ್ಲಾ ಕುಂಞಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಮುಖ್ಯ ಭಾಷಣ ಮಾಡಲಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸಿನ್ ಮಲ್ಪೆ ಅಭಿನಂದನಾ ಭಾಷಣ ಮಾಡಲಿದ್ದಾರೆ.
2023-24ನೇ ಸಾಲಿನ ’ಮಾನವ ರತ್ನ’ ಪ್ರಶಸ್ತಿಗೆ ಸಂಸದ ಸಸಿಕಾಂತ್ ಸೆಂಥಿಲ್, ’ಸೇವಾ ರತ್ನ’ ಪ್ರಶಸ್ತಿಗೆ ಕಾರ್ಕಳದ ಉದ್ಯಮಿ ಕೆ.ಎಸ್.ನಿಸಾರ್ ಅಹ್ಮದ್ ಮತ್ತು ಚೊಚ್ಚಲ ‘ಸೌಹಾರ್ದ ರತ್ನ’ ಪ್ರಶಸ್ತಿಗೆ ಉಡುಪಿಯ ಧರ್ಮಗುರು ಫಾ. ವಿಲಿಯಮ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಸಾಧಕರಾದ ಸಾಹಿತಿ ಡಾ.ಗಣನಾಥ ಎಕ್ಕಾರ್, ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಸರಸು ಡಿ.ಬಂಗೇರ, ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ದಲಿತ ನಾಯಕ ಅಣ್ಣಪ್ಪ ನಕ್ರೆ ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಹಸೈನಾರ್ ಕೋಡಿ ಕುಂದಾಪುರ ಅವರನ್ನು ಸನ್ಮಾನಿಸಲಾಗುವುದು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…