ಉಡುಪಿ: ನಾವು ತುಳುನಾಡು ಪ್ರತ್ಯೇಕ ಬೇಕು ಎಂದು ಕೇಳುತ್ತಿಲ್ಲ. ತುಳು ಬಾಷೆಗೆ ಎರಡನೇ ಆಧ್ಯತೆ ನೀಡಿ ಎಂದು ಕೇಳುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಹೇಳಿದ್ದಾರೆ.
ತುಳು ಭಾಷೆಗೆ ರಾಜ್ಯದಲ್ಲಿ ಎರಡನೇ ಸ್ಥಾನ ನೀಡುವಂತೆ ಕೇಳಿಕೊಂಡ ವಿಚಾರವಾಗಿ ಸಚಿವರು ಕನ್ನಡಕ್ಕೆ ದ್ರೋಹ ಮಾಡಿದ್ದಾರೆ ಎಂಬ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಆಧ್ಯತೆ. ಕನ್ನಡದ ಆಧ್ಯತೆ ಬಿಟ್ಟು ಬೇರೆ ಯಾವುದರ ಬಗ್ಗೆಯೂ ಆಲೋಚನೆ ಮಾಡಲು ಸಾಧ್ಯವಿಲ್ಲ. ಕನ್ನಡದ ಎಲ್ಲಾ ಚಟುವಟಿಕೆ ಹಾಗೂ ಕನ್ನಡಿಗರ ಜೊತೆಗೆ ಅವಿನಾಭಾವ ಸಂಬಂಧ ಇಟ್ಟುಕೊಂಡಿರುವುದು ತುಳುನಾಡು. ನಾವು ತುಳುನಾಡು ಪ್ರತ್ಯೇಕ ಬೇಕು ಎಂದು ಕೇಳುತ್ತಿಲ್ಲ. ತುಳು ಬಾಷೆಗೆ ಎರಡನೇ ಆಧ್ಯತೆ ನೀಡಿ ಎಂದು ಕೇಳುತ್ತಿದ್ದೇವೆ. ಕನ್ನಡಕ್ಕೇ ಪರಮೋಚ್ಚ ಆಧ್ಯತೆ ಎಂದರು. ಹಾಗೂ ಬೇರೆ ರಾಜ್ಯಗಳಲ್ಲಿ ಅಲ್ಲಿನ ಆಡಳಿತ ಭಾಷೆಯ ಜೊತೆಗೆ ಸ್ಥಳೀಯ ಭಾಷೆಗೆ ಎರಡನೇ ಆಧ್ಯತೆ ನೀಡಿರುವ ಹಿನ್ನೆಲೆಯಲ್ಲಿ ನಾವು ತುಳು ಭಾಷೆಗೆ ರಾಜ್ಯದಲ್ಲಿ ಎರಡನೇ ಸ್ಥಾನ ಕೇಳುತ್ತಿದ್ದೇವೆ. ಈ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಸಮಿತಿಯ ರಚನೆ ಮಾಡಲಾಗಿದೆ ಅದರ ವರದಿ ನೋಡಿಕೊಂಡು ಸರಕಾರ ತೀರ್ಮಾಣ ಕೈಗೊಳ್ಳುತ್ತದೆ ಎಂದರು.
ಇದೇ ವೇಳೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ದೊಡ್ಡ ಸಮ್ಮೇಳನ ನಡಿತಾ ಇದೆ. ಸಹಕಾರಿ ಹಾಗೂ ಗೃಹ ಸಚಿವ ಅಮಿತ್ ಶಾ ವರು ಬರುತ್ತಿರುವುದರಿಂದ ಸಹಜವಾಗಿಯೇ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದ್ದು, ಚುನಾವಣೆಗೆ ವೇಗ ಸಿಕ್ಕೇ ಸಿಗುತ್ತದೆ. ಈ ಎರಡೂ ಜಿಲ್ಲೆಯಲ್ಲಿಯೂ ಎಲ್ಲಾ ಕಡೆ ಗೆಲ್ಲಬೇಕು ಎಂದು ತಯಾರಿ ನಡೆಯುತ್ತಿದೆ. ಅಭಿವೃದ್ಧಿ ಮತ್ತು ಹಿಂದುತ್ವದ ಕಾರಣಕ್ಕೆ ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿಯುತ್ತಾರೆ ಎಂಬ ಭರವಸೆ ಇದೆ ಎಂದರು.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…