ಉಡುಪಿ: ಎರ್ಮಾಳಿನ ಸಮೀಪದ ಕೆಮ್ಮುಂಡೇಲಿನ ವಿದ್ಯಾರ್ಥಿನಿ ನಿಖಿತಾ ಕುಲಾಲ್ ಅನುಮಾನಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಉಡುಪಿಯ ಸಿಟಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದ್ದು, ಸಾವಿನ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಸ್ಪತ್ರೆಯ ಮುತ್ತಿಗೆಗೆ ಮುಂದಾದ ಘಟನೆ ನಡೆದಿದೆ.
ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆಯಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಡೆಯೊಡ್ಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ನಿಖಿತಾ ಕುಲಾಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ನಡೆಸಿ ತಪ್ಪತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ನನ್ನ ಮಗಳ ಸಾವು- ಶೋಭಾ ಕುಲಾಲ್ ಆರೋಪ: ಮಗಳ ದೇಹ ಸ್ಥಿತಿ ಗಂಭೀರವಾಗಿರುವುದನ್ನು ಕಂಡ ನನ್ನ ಗಂಡ ಮಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ನಾವು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆ ಕರೆದು ಕೊಂಡು ಹೋಗುವುದಾಗಿ ಕೇಳಿಕೊಂಡರು ಆಸ್ಪತ್ರೆಯ ವೈದ್ಯರು ಒಪ್ಪಲಿಲ್ಲ. ನನ್ನ ಮಗಳ ಸಾವಿಗೆ ಆಸ್ಪತ್ರೆಯ ನಿರ್ಲಕ್ಷವೇ ಕಾರಣ ಎಂದು ನಿಖಿತಾ ತಾಯಿ ಶೋಭಾ ಕುಲಾಲ್ ಆರೋಪಿಸಿದ್ದಾರೆ.
ವಾರದೊಳಗೆ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ಸಿಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ಎಬಿವಿಪಿ ರಾಜ್ಯ ಜೊತೆ ಕಾರ್ಯದರ್ಶಿ ಹರ್ಷಿತ್ ಕೊಯ್ಲ: ಮುಂದಿನ ಒಂದು ವಾರದೊಳಗೆ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ಸಿಗಬೇಕು. ಇಲ್ಲದಿದ್ದರೆ ಎಬಿವಿಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಬಿವಿಪಿ ರಾಜ್ಯ ಜೊತೆ ಕಾರ್ಯದರ್ಶಿ ಹರ್ಷಿತ್ ಕೊಯ್ಲ ಎಚ್ಚರಿಕೆ ನೀಡಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿ ನಿಖಿತ ಸಾವಿನ ಕುರಿತು ಸಾಕಷ್ಟು ಗೊಂದಲಗಳಿದ್ದು, ಇದಕ್ಕೆ ಸ್ಪಷ್ಟನೆ ಸಿಗಬೇಕೆಂಬ ಉದ್ದೇಶದಿಂದ ನಾವು ಪ್ರತಿಭಟನೆ ನಡೆಸಿದ್ದೇವೆ. ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಡಿಎಚ್ ಒ ಹಾಗೂ ಡಿಸಿಗೆ ಮನವಿ ಕೊಡುತ್ತೇವೆ ಎಂದರು.
ವಿದ್ಯಾರ್ಥಿನಿ ನಿಖಿತ ಸಾವಿನ ಬಗ್ಗೆ ಆಸ್ಪತ್ರೆಯವರು ದಿಕ್ಕು ತಪ್ಪಿಸಿದ್ದಾರೆ- ಸಂತೋಷ್ ಕುಲಾಲ್ ಪಕ್ಕಾಲು ಆರೋಪ: ವಿದ್ಯಾರ್ಥಿನಿ ನಿಖಿತ ಸಾವಿನ ಘಟನೆ ನೋವಿನ ಸಂಗತಿ. ಕುಟುಂಬಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಆಸ್ಪತ್ರೆ ಯವರು ಸರಿಯಾದ ಸ್ಪಷ್ಟೀಕರಣ ನೀಡಿಲ್ಲ. ಈಗಾಗಲೇ ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ವಿದ್ಯಾರ್ಥಿನಿ ಮೃತಪಟ್ಟ ಬಳಿಕ ಕುಟುಂಬಕ್ಕೆ ಹಾಗೂ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಅದೊಂದು ಗೊಂದಲ ಇನ್ನೂ ಕೂಡ ಕಾಡುತಿದೆ ಎಂದು ಕುಂಬಾರರ ಗುಡಿಕೈಗಾರಿಕೆ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕುಲಾಲ್ ಸಂಘದ ವತಿಯಿಂದ ಎಸ್ಪಿ, ಡಿಎಚ್ಒ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡುತ್ತೇವೆ. ವಿದ್ಯಾರ್ಥಿನಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡದಿದ್ರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…