Featured

ಉಡುಪಿ : ನಿಟ್ಟೂರು ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ ; ಧಾರೆ ಎರೆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24

ಉಡುಪಿ : ನಿಟ್ಟೂರು ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ ; ಧಾರೆ ಎರೆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ ಅವರ ವಿವಾಹವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿನೇಶ ಎ.ಪಿ ಅಂಬುತೀರ್ಥ ಅವರ ಮಗನಾದ ಮಧುರಾಜ್ ಎ.ಡಿ ಅವರೊಂದಿಗೆ ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ವಾದ್ಯ, ತಾಳ-ಮೇಳಗಳೊಂದಿಗೆ ನಡೆದ ಶುಭಲಗ್ನ ಸುಮುಹೂರ್ತದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶಾಸ್ತೊçÃಸ್ತçವಾಗಿ ಧಾರೆ ಎರೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ತೀರ್ಥಹಳ್ಳಿಯ ಮೂಲದ 29 ವರ್ಷ ವಯೋಮಿತಿಯ ಮಧುರಾಜ್ ಎ.ಡಿ ಅವರು, ನಿಲಯದ ನಿವಾಸಿನಿಯಾದ 21 ವರ್ಷ ಪ್ರಾಯದ ಖುಷ್ಬು ಸುಮೇರಾ ಅವರನ್ನು ಮದುವೆಯಾಗುವುದಾಗಿ ಈ ಹಿಂದೆ ಪ್ರಸ್ತಾಪಿಸಿರುತ್ತಾರೆ.

ಮಧುರಾಜ್ ಅವರು ಪದವಿ ವಿದ್ಯಾರ್ಹತೆ ಹೊಂದಿದ್ದು, ಜೀವನ ನಿರ್ವಹಣೆಗಾಗಿ ಕೃಷಿ ಮತ್ತು ಕ್ಯಾಟರಿಂಗ್ ಕಾರ್ಯಗಳಲ್ಲಿ ತೊಡಗಿಕೊಂಡು, ಆರ್ಥಿಕವಾಗಿ ಸದೃಢರಾಗಿರುವ ಮಧುರಾಜ್ ಎ.ಡಿ ಕುಟುಂಬವನ್ನು ಪೊಲೀಸ್ ಹಾಗೂ ರಾಜ್ಯ ನಿಲಯದ ಸಿಬ್ಬಂದಿಗಳು ಅವರ ಹಿನ್ನೆಲೆಯನ್ನು ಪರಿಶೀಲಿಸಿ, ಆರೋಗ್ಯ ದೃಢೀಕರಣ ಪಡೆದುಕೊಂಡು, ಹುಡುಗಿ ಒಪ್ಪಿಗೆಯೊಂದಿಗೆ ರಾಜ್ಯ ಮಹಿಳಾ ನಿಲಯದಲ್ಲಿ ಈ ಶುಭಕಾರ್ಯವನ್ನು ಅದ್ದೂರಿಯಾಗಿ ಮದುವೆಗೆ ದಾನಿಗಳು ಸಹಕಾರದಿಂದ ನಡೆಸಲಾಗಿದೆ ಎಂದರು.

ಸರಕಾರದಿಂದ ಹುಡುಗಿಯ ಹೆಸರಿನಲ್ಲಿ ಮುಂದಿನ ಜೀವನ ನಿರ್ವಹಣೆಗೆ 20000 ರೂ. ನೀಡಲಾಗಿದ್ದು, ಮದುವೆಯ ನಂತರ ವಿವಾಹ ನೋಂದಣಿ ಮಾಡಿಸಲಾಗುವುದು. ಪ್ರತೀ ಮೂರು ತಿಂಗಳಿಗೊಮ್ಮೆ ಮೂರು ವರ್ಷದವರೆಗೆ ಇಲಾಖೆಯು ವಧು-ವರರ ಮುಂದಿನ ಜೀವನದ ಮೇಲೆ ನಿಗಾ ವಹಿಸಲಿದೆ ಎಂದರು.

ಪ್ರಸ್ತುತ ಮಹಿಳಾ ನಿಲಯದಲ್ಲಿ 66 ಮತ್ತು ಮೂರು ಮಕ್ಕಳು ಸೇರಿದಂತೆ ಒಟ್ಟು 69 ಮಂದಿ ಇದ್ದು, ಮಹಿಳಾ ನಿಲಯದಲ್ಲಿ ವಾಸವಿರುವ ಹುಡುಗಿಯರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅವರ ಭವಿಷ್ಯದ ಬಗೆಗಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.

ರಾಜ್ಯ ಮಹಿಳಾ ನಿಲಯವನ್ನು ತಳಿರು, ತೋರಣ, ರಂಗೋಲಿಯಿoದ ಅಲಂಕರಿಸಲಾಗಿದ್ದು, ಬಂದತAತಹ ಅತಿಥಿಗಳಿಗೆ ಇಲಾಖೆಯ ಸಿಬ್ಬಂದಿಗಳು ಆದರದಿಂದ ಬರಮಾಡಿಕೊಂಡರು. ಮದುವೆಯ ಬಂದವರು ವಧುವರರಿಗೆ ಶುಭಹಾರೈಸಿ, ಸಿಹಿಭೋಜನವನ್ನು ಸವಿದರು.

ಕಾರ್ಯಕ್ರಮದಲ್ಲಿ ಎಎಸ್‌ಪಿ ಟಿ ಸಿದ್ದಲಿಂಗಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುರುಷೋತ್ತಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪಾರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ರಾಜ್ಯ ಮಹಿಳಾ ನಿಲಯದ ಸಿಬ್ಬಂದಿಗಳು, ನಿವಾಸಿನಿಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

4 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

4 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

5 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

7 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

7 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

7 hours ago