Featured

ಉಡುಪಿ : ನಿಫಾ ವೈರಸ್ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. -Vishwanews24

ಉಡುಪಿ : ನಿಫಾ ವೈರಸ್ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. -Vishwanews24

ಉಡುಪಿ : ನಿಫಾ ವೈರಸ್ ಬಗ್ಗೆ ಜನರು ಆತಂಕಗೊಳ್ಳದೆ ಆರೋಗ್ಯ ಇಲಾಖೆ ಸೂಚಿಸುವ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್. ಎಂ ಹೇಳಿದರು.

ಅವರು ಇಂದು ತಮ್ಮ ಕಛೇರಿಯ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಹಾಗೂ ಜಿಲ್ಲಾ ಮಟ್ಟದ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಂಡು ಬಂದಿದ್ದು, ಅಲ್ಲಿನ ಜನರು ನಾನಾ ಕಾರಣಗಳಿಂದ ಜಿಲ್ಲೆಗೆ ಬಂದು ಹೋಗುತ್ತಾರೆ, ಸರ್ಕಾರ ಕೇರಳ ರಾಜ್ಯದಿಂದ ಜನರು ಬರುವುದನ್ನು ಹಾಗೂ ಹೋಗುವುದನ್ನು ನಿರ್ಬಂದಿಸಿದೆ, ಆದರೂ ಸಹ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಜ್ವರ, ಕೀಲುನೋವು, ದೇಹದ ಆಯಾಸ, ತಲೆನೋವು, ತಲೆ ಸುತ್ತುವಿಕೆ, ಮಾನಸಿಕ ಗೊಂದಲ, ಜ್ಞಾನ ತಪ್ಪುವುದು, ನಿಫಾ ವೈರಾಣು ಜ್ವರದ ಲಕ್ಷಣಗಳಾಗಿವೆ ಎಂದರು.

ಸಾಮಾನ್ಯವಾಗಿ ಸೋಕಿತ ಬಾವಲಿಗಳ ನೇರ ಸಂಪರ್ಕದಿAದ ಅಥಾವ ಬಾವಲಿಗಳು ಸೇವಿಸಿ ಬಿಸಾಡಿದ ಹಣ್ಣು-ಹಂಪಲುಗಳನ್ನು ಸೇವಿಸುವುದರಿಂದ ಇತರೆ ಪ್ರಾಣಿಗಳಿಗೂ ಹರಡುವ ಸಾದ್ಯತೆ ಇದೆ ಎಂದರು.

ಸಾರ್ವಜನಿಕರಿಗೆ ನಿಫಾ ಸೋಕಿನ ಹರಡುವಿಕೆ ಮತ್ತು ನಿಯಂತ್ರಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಸಿದರು.

ಕೇರಳದಿಂದ ಬರುವವರಿಗೆ ಕಡ್ಡಾಯವಾಗಿ 72 ಗಂಟೆಯೊಳಗಿನ ಕೋವಿಡ್ ಸೋಂಕಿನ ನೆಗೇಟಿವ್ ವರದಿಯನ್ನು ಹೊಂದಿ ಬಂದತಹ ವ್ಯಕ್ತಿಯನ್ನು ಕಡ್ಡಾಯವಾಗಿ 7 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಬೇಕು, ಅಲ್ಲದೆ ಕೋವಿಡ್ ಪರೀಕ್ಷೆಗೆ ಒಳಪಡಬೇಕು, ಕೊಲ್ಲುರು ದೇವಸ್ಥಾನ ಸೇರಿದಂತೆ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಬರುವಂತವರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದರು.

ಜನರು ಹೇಚ್ಚು ಸೇರುವಂತಹ ಮಾರುಕಟ್ಟೆ, ಸಂತೆಗಳಲ್ಲಿ, ಸಭೆ, ಸಮಾರಂಭಗಳಲ್ಲಿಯೂ ಸಹ ಸೋಂಕು ಹೆಚ್ಚು ಹರಡುವ ಸಾಧ್ಯೆತೆ ಇರುವುದರಿಂದ ಅಲ್ಲಿಯೂ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು-ಹೆಚ್ಚು ಕೈಗೊಳ್ಳಬೇಕು ಎಂದರು.

ಹೊರ ದೇಶ, ಹೊರ ರಾಜ್ಯಗಳಿಂದ ವಿದಾಭ್ಯ್ಯಾಸಕ್ಕೆ ಬಂದು ವಿಧ್ಯಾರ್ಥಿ ನಿಲಯಗಳಲ್ಲಿ ತಂಗುವವರನ್ನು ಕಾಲ-ಕಾಲಕ್ಕೆ ಕೋವಿಡ್ ಪರೀಕ್ಷೆಗೊಳಪಡಿಸಬೇಕು ಎಂದ ಅವರು ಕೋವಿಡ್ ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು, ಗ್ರಾಮಗಳಿಗೆ ಹೊರಗಿನಿಂದ ಬಂದವರ ಮಾಹಿತಿಯನ್ನು ನೆರೆ-ಹೊರೆಯವರು ಟಾಸ್ಕ್-ಪೊರ್ಸ್ ಸಮಿತಿಗೆ ನೀಡಬೇಕು ಎಂದರು.

ಪ್ರತಿ ಶಾಲಾ-ಕಾಲೇಜುಗಳಿಗೆ ಒಬ್ಬ ಕೋವಿಡ್ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಅಲ್ಲಿನ ಕೋವಿಡ್ ಸೋಂಕಿನ ಸ್ಥಿತಿಗತಿಗಳ ಬಗ್ಗೆ ನಿಗಾವಹಿಸುವ ಕಾರ್ಯವಾಗಬೇಕು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಮಾತನಾಡಿ ಪ್ರಾಣಿ, ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬಾರದು, ಬಾವಲಿಗಳು ಹೆಚ್ಚು ಇರುವ ಪ್ರದೇಶಗಳಿಂದ ಸಂಗ್ರಹಿಸಿದ ಸೇಂದಿ, ನೀರಾ, ತಾಳೆ ಹಣ್ಣಿನ ರಸವನ್ನು ಸೇವಿಸಬಾರದು. ಹಣ್ಣು ಮತ್ತು ಒಣ ಖರ್ಜೂರವನ್ನು ಸೇವಿಸುವ ಮೊದಲು ಸಂಪೂರ್ಣವಾಗಿ ಶುದ್ದೀಕರಿಸಿಕೊಳ್ಳಬೇಕು ಎಂದರು.

ಸೋAಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು, ರಕ್ತ ಹಾಗೂ ನೇರ ಸಂಪರ್ಕದಿAದ ಸೋಂಕು ಹರಡುವ ಸಾದ್ಯತೆ ಇರುತ್ತದೆ. ಪ್ರತಿಯೊಬ್ಬರೂ ಕೈ-ಗಳನ್ನು ಆಗಿಂದಾಗೆ ಶುದ್ಧೀಕರಿಸಿಕೊಳ್ಳಬೇಕು. ಬಾವಲಿಗಳು ವಾಸವಿರುವ ಬಾವಿಯ ನೀರನ್ನು ಕುದಿಸದೆ ಉಪಯೋಗಿಸಬಾರದು ಎಂದ ಅವರು ಸೋಂಕಿತರನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago