ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿಯ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ.
ದುಬೈನಲ್ಲಿ ವಾಸವಿರುವ ಕೇರಳ ಮೂಲದ ಸುಲೈಮನ್ ಮೊಹಮ್ಮದ್ (29), ಮೊಹಮ್ಮದ್ ಶರೀಫ್ (27) ಮತ್ತು ಅಬ್ದುಲ್ ನಜೀರ್ (25) ಎಂಬ ಯುವಕರು ಮಣಿಪಾಲದಲ್ಲಿರುವ ಸ್ನೇಹಿತರ ಆಹ್ವಾನದ ಮೇರೆಗೆ ಡಾಡ್ಜ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಜಿಲ್ಲಾಧಿಕಾರಿ ರಸ್ತೆಯಲ್ಲಿ ನಿಯಮ ಮೀರಿ ಓಡಾಟ ನಡೆಸಿದ್ದ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಆರು ತಿಂಗಳು ಭಾರತದಲ್ಲಿ ತಿರುಗಾಡಲು ಕಾರುಗಳನ್ನು, ಸಮುದ್ರದ ಮುಖಾಂತರ ಹಡಗಿನಲ್ಲಿ ಆಮದು ಮಾಡಿಕೊಂಡಿದ್ದರು. ದುಬೈ ದೇಶಕ್ಕೆ 30 ಲಕ್ಷ ರೂ. ಹಾಗೂ ಭಾರತಕ್ಕೆ 1 ಕೋಟಿ ರೂ. ಹಣ ಕಟ್ಟಿರುವುದಾಗಿ ಪೊಲೀಸರ ಬಳಿ ಯುವಕರು ತಿಳಿಸಿದ್ದಾರೆ.
ಕಾರುಗಳ ದಾಖಲೆಗಳನ್ನ ಆರ್‌ಟಿಓಗೆ ಕಳುಹಿಸಿದ ಪೊಲೀಸರು, ದುಬೈ ನೋಂದಣಿ ಕಾರು ಓಡಾಟಕ್ಕೆ ಅನುಮತಿ ಇದೆಯೇ ಎಂದು ಪರಿಶೀಲನೆ ನಡೆಸಿದರು. ಕಾರು ಚಲಾಯಿಸುವ ಅನುಮತಿ ಇರುವ ಹಿನ್ನೆಲೆ ಆರ್‌ಟಿಓ ಅನುಮತಿ ಮೇರೆಗೆ ಕರ್ಕಶ ಶಬ್ದ ಮಾಡಿದ 3 ಕಾರುಗಳ ಮೇಲೆ 1,500 ರೂ. ಫೈನ್ ಹಾಕಿ ಕಳುಹಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…