ಉಡುಪಿ : ನಿರಂತರ ಮಳೆ – ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ -Vishwanews24

Featured, ಉಡುಪಿ

ಉಡುಪಿ : ನಿರಂತರ ಮಳೆ – ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ -Vishwanews24

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ನಾಳೆ (ಜು.1) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ಇನ್ನು ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

Leave a Reply