Featured

ಉಡುಪಿ : ನಿರಂತರ ಸೋಲಿನಿಂದ ಕಂಗೆಟ್ಟು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯ : ಕುಯಿಲಾಡಿ -Vishwanews24

ಉಡುಪಿ : ನಿರಂತರ ಸೋಲಿನಿಂದ ಕಂಗೆಟ್ಟು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯ : ಕುಯಿಲಾಡಿ -Vishwanews24

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಒಬ್ಬ ಗೋಮುಖ ವ್ಯಾಘ್ರ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಕಾಂಗ್ರೆಸಿನ ನಿರಂತರ ಸೋಲಿನಿಂದ ಕಂಗೆಟ್ಟು ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ದೇಶದ ಪ್ರಧಾನಿಗೆ ಗೌರವ ನೀಡದ ಸಿದ್ಧರಾಮಯ್ಯ ತನ್ನ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅದೆಷ್ಟು ಹಿಂದೂಗಳ ಸರಣಿ ಹತ್ಯೆ ನಡೆದಿದೆ ಎಂಬುದನ್ನು ಒಮ್ಮೆ ಅವಲೋಕಿಸಿದರೆ ಯಾರು ಗೋಮುಖ ವ್ಯಾಘ್ರ ಎಂಬುದನ್ನು ತಿಳಿಯಲು ಸಾಧ್ಯ. ಬಾಯ್ತೆರೆದರೆ ಕೋಮುವಾದ ಎಂಬಿತ್ಯಾದಿ ಸದಾ ವಿವಾದಿತ ಹೇಳಿಕೆಗಳನ್ನು ನೀಡುತ್ತಾ, ಧರ್ಮ- ಜಾತಿಗಳನ್ನು ಒಡೆಯುತ್ತಾ, ಒಂದೇ ವರ್ಗದ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯಗೆ ದೇಶದ ಪ್ರಧಾನಿ
ಮತ್ತು ಜಾತ್ಯಾತೀತತೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕುಯಿಲಾಡಿ ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯಾ ನಂತರ ಕಾಂಗ್ರೆಸನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾ ಗಾಂಧಿ     ಮಾತನ್ನೇ ಈಡೇರಿಸದ ಕಾಂಗ್ರೆಸ್ ಪಕ್ಷ ಇಂದು ತನ್ನ ದೇಶ ವಿರೋಧಿ ನೀತಿಯಿಂದಾಗಿ ಅಧಪತನದತ್ತ ಸಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವ ಕೀಳು ಮನಸ್ಥಿತಿಯ
ಸಿದ್ಧರಾಮಯ್ಯ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರನ್ನು ಅವಮಾನಿಸಿದಂತಾಗಿದೆ. ಸುಪ್ರೀಂ ಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರದ ದೇಣಿಗೆ ಸಂಗ್ರಹದ ಬಗ್ಗೆಯೂ ಅಪಸ್ವರ ಎತ್ತಿರುವ ಸಿದ್ಧರಾಮಯ್ಯ ವರ್ತನೆ ಹಿಂದೂ ವಿರೋಧಿ ನೀತಿಗೆ ಜ್ವಲಂತ ಉದಾಹರಣೆ. ಹೆಸರಲ್ಲಿ ರಾಮ ಎಂಬ ಪದ ಇರುವ ಮಾತ್ರಕ್ಕೆ ಹಿಂದೂ ವಿರೋಧಿಯೊಬ್ಬ ರಾಮಭಕ್ತನಾಗಲು ಸಾಧ್ಯವೇ ಎಂದು ಕುಯಿಲಾಡಿ ಪ್ರಶ್ನಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

4 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago