Featured

ಉಡುಪಿ : ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್‌ ಹಾಗೂ ಚರಾಸ್‌ ಸಾಗಾಟ ; ಆರೋಪಿ ಬಂಧನ – vishwanews24

ಉಡುಪಿ : ನಿಷೇದಿತ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ; 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ , ಚರಾಸ್‌ ಮತ್ತು ಇತರ ಸೊತ್ತು ವಶ

ಉಡುಪಿ: ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್‌ ಹಾಗೂ ಚರಾಸ್‌ ಸಾಗಾಟ ಮಾಡತ್ತಿದ್ದ ಆರೋಪಿಯನ್ನು ಬಂಧಿಸಿ, ಸೊತ್ತುಗಳ ವಶಪಡಿಸಿಕೊಂಡ ಘಟನೆ ಜ.4ರ ಶನಿವಾರ ನಡೆದಿದೆ.

ಬ್ರಹ್ಮಾವರದ ಉಪ್ಪೂರು ನಿವಾಸಿ, ನಾಗರಾಜ್‌ (25) ಬಂಧಿತ ಆರೋಪಿ.

ಆರೋಪಿ ನಾಗರಾಜ್‌ ನಿಂದ 3.25 ಲಕ್ಷ ರೂ. ಮೊತ್ತದ ಎಂ.ಡಿ.ಎಂ.ಎ , ಚರಾಸ್‌ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈತ ತಾಲೂಕಿನ ಶಿವಳ್ಳಿ ಗ್ರಾಮದ ಬೀಡನಗುಡ್ಡೆಯ ಮಹಾತ್ಮಾ ಗಾಂಧಿ ಬಯಲು ರಂಗಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೋಟಾರು ಬೈಕ್‌ನಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಪೌಡರ್‌ ಹಾಗೂ ಚರಾಸ್‌ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎಂದು ತಿಳಿದು ಬಂದಿದೆ.

ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಪ್ರಭುಡಿ.ಟಿ ಹಾಗೂ ಉಡುಪಿ ನಗರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುನೀತ್‌ ಕುಮಾರ್‌, ಸಿಬ್ಬಂದಿಯವರಾದ ಸುರೇಶ್, ಬಶೀರ್, ಹೇಮಂತ್‌, ರಾಜೇಶ್‌, ವಿನಯ್‌ , ಆನಂದ, ಶಿವ ಕುಮಾರ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ಧರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

22 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

22 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

22 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago