ಉಡುಪಿ: ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಮಾರಾಟಕ್ಕೆ ಬಳಸಿದ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಪೌಡರ್ ಅನ್ನು ಮಾರಾಟ ಮಾಡಲು ಯತ್ನಿಸುತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪ್ರೇಮನಾಥ, ಶೈಲೇಶ, ಪ್ರಜ್ವಲ್ ,ರತನ್ ಈ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 37 ಗ್ರಾಂ 27 ಮಿಲಿ ಗ್ರಾಂ ತೂಕದ ಎಂಡಿಎಂಎ, 1ಕೆ.ಜಿ 112 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದು, ಎಂಡಿಎಂಎ ಅಂದಾಜು ಮೌಲ್ಯ ರೂ. 2 ಲಕ್ಷ , ಗಾಂಜಾದ ಅಂದಾಜು ಮೌಲ್ಯ ರೂ. 87,500, ಆಗಿರುತ್ತದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಮೊಬೈಲ್ 5 ಪೋನ್, ಅಂದಾಜು ಮೌಲ್ಯ ರೂ. 41 ಸಾವಿರ , ಗಾಂಜಾವನ್ನು ಸಾಗಾಟ ಮಾಡಲು ಬಳಸಿದ ಬ್ಯಾಗ್ ಇನ್ನಿತರ ವಸ್ತುಗಳು ಸಹಿತ ನಗದು ರೂಪಾಯಿ 7130 ಅನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಎಂಡಿಎಂ ಪೌಡರ್ ಅನ್ನು ಬೆಂಗಳೂರಿನಿಂದ ಖರೀದಿಸಿರುವುದಾಗಿ ಆರೋಪಿ ಪ್ರೇಮ್ ತಿಳಿಸಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…