ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು.
ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.
ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್ ಗಳನ್ನು ಉಪಯೋಗಿಸುವುದು ಕಂಡುಬ0ದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…