Featured

ಉಡುಪಿ: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ – ದಂಡ ವಸೂಲಿ – vishwanews24

ಉಡುಪಿ: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ – ದಂಡ ವಸೂಲಿ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.

ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ಉಪಯೋಗಿಸುವುದು ಕಂಡುಬ0ದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago