ಉಡುಪಿ : ಪ್ರತಿಯೊಬ್ಬರು ತಾವು ಮಾಡುವ ಸೇವೆಯಲ್ಲಿ ಸಾರ್ಥಕತೆ ಪಡೆದುಕೊಳ್ಳಬೇಕಾದರೆ, ಮಾಡುವ ಸೇವೆಯಲ್ಲಿ ನಿಸ್ವಾರ್ಥ ಮನೋಭಾವ ಹೊಂದಿರಬೇಕು ಎಂದು ಉಡುಪಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆoಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಹೇಳಿದರು.
ಅವರು ಇಂದು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ನಡೆದ ಘಟಕಾಧಿಕಾರಿಗಳ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪೊಲೀಸ್, ಜಿಲ್ಲಾಡಳಿತ ಹಾಗೂ ಸರ್ಕಾರದ ಇತರ ಇಲಾಖೆಗಳಲ್ಲಿ, ಕಾನೂನು ಸುವ್ಯವಸ್ಥೆ, ಪ್ರಕೃತಿ ವಿಕೋಪ ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ಗೃಹ ರಕ್ಷಕರಲ್ಲಿಯೂ ಸ್ವಯಂ ಸೇವಾ ಹಾಗೂ ನಿಸ್ವಾರ್ಥ ಮನೋಭಾವಗಳು ಜಾಗೃತವಾಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕುಂದಾಪುರ, ಜಿಲ್ಲಾ ಉಪ ಕಮಾಂಡೆAಟ್ ರಮೇಶ್, ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ, ಅಧಿಕಾರಿಗಳಾದ ಪ್ರಭಾಕರ ಸುವರ್ಣ ಕಾರ್ಕಳ, ಸ್ಟೀವನ್ ಪ್ರಕಾಶ್ ಬ್ರಹ್ಮಾವರ, ಕೆ. ಭಾಸ್ಕರ್ ಕುಂದಾಪುರ, ಕುಮಾರ ಉಡುಪಿ, ನವೀನ್ ಕುಮಾರ ಪಡುಬಿದ್ರಿ, ರಾಘವೇಂದ್ರ ಬೈಂದೂರು, ಶೇಖರ ಮಣಿಪಾಲ ಹಾಗೂ ಶ್ಯಾಮಲಾ ಎ ಉಪಸ್ಥಿತರಿದ್ದರು.
ಗೃಹ ರಕ್ಷಕ ದಳದ ಸೇವೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಡಾ. ಕೆ. ಪ್ರಶಾಂತ್ ಶೆಟ್ಟಿ ಹಾಗೂ ಕಾಪು ಘಟಕಾಧಿಕಾರಿ ಲಕ್ಷ್ಮೀನಾರಾಯಣ ರಾವ್ ಅವರನ್ನು ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…