ಉಡುಪಿ: ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ ಗಡಿಭಾಗದಲ್ಲೇ ಕುಳಿತು ಮುತಾಲಿಕ್ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ.
ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ಮಾಡದಂತೆ ಸೂಚನೆ ನೀಡಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಹೊರಟಿದ್ದ ಅವರನ್ನು ಉಡುಪಿ-ಮಂಗಳೂರು ಗಡಿಭಾಗದ ಹೆಜಮಾಡಿಯಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ. ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಿಕೊಳ್ಳಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ. ಸಾಂತ್ವನ ಹೇಳಲು ಹೋಗುತ್ತಿದ್ದೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.\
ಇದಕ್ಕೂ ಮೊದಲು ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಬಿಜೆಪಿಯ ನಾಯಕರು ಮೂರು ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು. ಈ ಸೂಕ್ಷ್ಮ ಕಾಲದಲ್ಲಿ ಯಾವುದೇ ಕ್ರಿಯೆ-ಪ್ರತಿಕ್ರಿಯೆ ವಿಧಾನ ಇರಬಾರದು. ಎಲ್ಲ ಸಮುದಾಯದ ಮುಖಂಡರು ಒಟ್ಟಾಗಿ ಕುಳಿತು ಶಾಂತಿ ಮಾತುಕತೆ ನಡೆಸಬೇಕು ಎಂದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…