ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ
ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ
ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.
ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹ್ಮದ್, ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಎಲ್ಲ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಿ, 2026ರ ಸೆಪ್ಟೆಂಬರ್ 30ರೊಳಗೆ ಹೊಸ ಕಟ್ಟಡದಲ್ಲಿ ಆಸ್ಪತ್ರೆಯ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿದರು.
ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24
ಸೆಪ್ಟೆಂಬರ್ 30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅಕ್ಟೋಬರ್ 1ರಿಂದ ಆಸ್ಪತ್ರೆಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು. ಪ್ರತಿದಿನವೂ ವಿಭಿನ್ನ ರೀತಿಯ ಹೋರಾಟ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಎಚ್ಚರಿಸಿದರು.
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್ ನ ಆಹಾರ ಪರವಾನಗಿ ಅಮಾನತು – vishwanews24
ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಉಡುಪಿ ಶಾಸಕರು ಹಾಗೂ ಅಧಿಕಾರಿಗಳು ಜಿಲ್ಲಾಸ್ಪತ್ರೆ ಆರಂಭಿಸುವ ವಿಚಾರದಲ್ಲಿ ಸೂಕ್ತ ಗಮನ ಹರಿಸುತ್ತಿಲ್ಲ. ಇನ್ನಾದರೂ ಈ ಬಗ್ಗೆ ಕಾರ್ಯೋನ್ಮುಖರಾಗಿ, ಶೀಘ್ರ ಆಸ್ಪತ್ರೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
