Featured

ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡಕ್ಕೆ ಆಸ್ಕರ್ ಫೆರ್ನಾಡಿಸ್ ಹೆಸರಿಡಲು ಕಾಂಗ್ರೆಸ್ ನಾಯಕರ ಮನವಿ – vishwanews24

ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡಕ್ಕೆ ಆಸ್ಕರ್ ಫೆರ್ನಾಡಿಸ್ ಹೆಸರಿಡಲು ಕಾಂಗ್ರೆಸ್ ನಾಯಕರ ಮನವಿ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟು ಹಾಗೂ ಕರ್ನಾಟಕ ರಾಜ್ಯ ಹಾಗೂ ದೇಶಕ್ಕೆ ಅನೇಕ ಕೊಡುಗೆಗಳನ್ನು ಕೊಟ್ಟ ಮಾಜಿ ಲೋಕ ಸಭಾ ಸದಸ್ಯರು ಹಾಗೂ ಮಾಜಿ ಸಚಿವರಾದ ದಿವಂಗತ ಆಸ್ಕರ್ ಫೆರ್ನಾ೦ಡೀಸ್ ರವರ ಹೆಸರನ್ನು ಇಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಈ ನೂತನ ಸರಕಾರಿ ಜಿಲ್ಲಾ ಆಸ್ಪತ್ರೆಗೆ ದಿವಂಗತ ಆಸ್ಕರ್ ಫೆರ್ನಾಂಡಿಸ್ ಹೆಸರನ್ನು ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಾಜ ಸೇವಕರು ಕಾಂಗ್ರೆಸ್ ಮುಖಂಡರು ಕೆ.ಕೃಷ್ಣಮೂರ್ತಿ ಆಚಾರ್ಯರವರು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನ ಸಭಾ ಸಭಾಧ್ಯಕ್ಷರಾದ ಯು. ಟಿ ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ತ್ ಶಾಸಕರಾದ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ತ್ ಸದಸ್ಯರಾದ ಐವನ್ ಡಿಸೋಜರವರಿಗೆ ಮನವಿ ಮಾಡಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

8 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

8 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

12 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

13 hours ago