ಉಡುಪಿ: ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು, ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು : ಕಲ್ಲಡ್ಕ ಪ್ರಭಾಕರ ಭಟ್ -Vishwanews24

ಉಡುಪಿ: ಮಾಜಿ ಪ್ರಧಾನಿ ನೆಹರೂ ಮತ್ತು ಅವರ ಬೆಂಬಲಿಗರದ್ದು ಹೇಡಿಗಳ ತಂಡ. ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು. ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು. ಬ್ರಿಟಿಷರು ಇನ್ನೈದು ವರ್ಷ ಭಾರತದಲ್ಲಿ ಇದ್ದಿದ್ದರೆ ಭಾರತದ ಸ್ಥಿತಿ ಹೀಗಾಗದೆ ಸ್ಥಿರವಾಗಿರುತ್ತಿತ್ತು ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಉಡುಪಿಯ ಕಟಪಾಡಿಯಲ್ಲಿ ಪೌರತ್ವ ಕಾಯ್ದೆಯ ಜನಜಾಗೃತಿ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, 72 ವರ್ಷದಲ್ಲಿ ಭಾರತ ದೇಶ ಭೂಮಿಯನ್ನೂ ಹಿಂದೂಗಳನ್ನು ಕಳೆದುಕೊಳ್ಳುತ್ತಿದೆ. ಅದ್ಭುತ ಹಿಂದೂ ಸಮಾಜ ಪಾತಾಳಕ್ಕೆ ಕುಸಿಯುತ್ತಿದೆ ಎಂದರು.

ಅಂಬೇಡ್ಕರ್ ಒಬ್ಬರು ರಾಷ್ಟ್ರೀಯ ನಾಯಕ. ಅವರನ್ನು ಒಂದು ಜಾತಿಗೆ ಸೀಮಿತ ಮಾಡಿದ್ದು ನಮ್ಮ ದುರ್ದೈವ. ಅಂಬೇಡ್ಕರ್ ಹೇಳಿದಂತೆ ನಾವು ಅವತ್ತೇ ಮಾಡಬೇಕಿತ್ತು. ಭಾರತದ ಮುಸಲ್ಮಾನರು ಪಾಕಿಸ್ತಾನಕ್ಕೆ ಹೋಗಲಿ ಎಂದಿದ್ದ ಅಂಬೇಡ್ಕರ್ ಅವರ ಮಾತಿನಂತೆ ನಾವು ಮಾಡಬೇಕಿತ್ತು. ಅವರ ಸಲಹೆಯನ್ನು ಯಾರೂ ನಡೆಸಿಕೊಡಲಿಲ್ಲ. ಪಾಕ್‍ನ ಹಿಂದೂಗಳು ಭಾರತಕ್ಕೆ ಬರಲಿ ಎಂದು ಅವತ್ತೇ ಸಲಹೆ ಕೊಟ್ಟಿದ್ದರು ಎಂದು ಹೇಳಿದರು.

ಹಿಂದೂಗಳು ದೇವರನ್ನು ಪ್ರತಿದಿನ ಆರಾಧಿಸುತ್ತಾರೆ. ಸರ್ವೇಜನ ಸುಖಿನೋ ಭವಂತು ಅಂದ್ರೆ ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಸಂಸ್ಕೃತಿ ಭಾರತದ್ದು. ನಮ್ಮವರಿಗೆ ಮಾತ್ರ ಒಳ್ಳೆಯದಾಗಲಿ ಎಂಬ ಸಂಸ್ಕೃತಿ ನಮ್ಮದಲ್ಲ. ಶುಕ್ರವಾರ ಇರುವ ಅಲ್ಲಾ ಶನಿವಾರ ಎಲ್ಲಿ ಹೋಗ್ತಾನೆ? ಭಾನುವಾರ ಬೆಳಗ್ಗೆ ಬರುವ ಏಸು ಉಳಿದ ದಿನ ಎಲ್ಲಿ ಇರುತ್ತಾನೆ ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸುವ ಮಾತನಾಡಿದರು.

 

ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸಿದ್ದರಾಮಯ್ಯ ಅವರದ್ದು ಷಂಡ ಸರ್ಕಾರ. ಸೊರಕೆ-ಮಧ್ವರಾಜ್ ಬೆರಕೆಯವರು. ಹಗಲು ಮಾತ್ರವಾ? ರಾತ್ರಿಯೂ ಮುಸಲ್ಮಾನರ ಜೊತೆಗಿರ್ತಾರಾ ಎಂದು ಪ್ರಶ್ನಿಸುವ ಮೂಲಕ ಚರ್ಚಾಸ್ಪದ ಹೇಳಿಕೆ ಕೊಟ್ಟರು. ಅಲ್ಲದೆ ಕಾಂಗ್ರೆಸಿಗರಿಗೆ ಇಂಜೆಕ್ಷನ್‍ನಲ್ಲಿ ಬೇರೆ ಜೀನ್ಸ್ ತುಂಬಿದೆ. ಪೌರತ್ವ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದ್ದು, ಅದಕ್ಕೆ ಈಗ ತಿದ್ದುಪಡಿ ತರಲಾಗುತ್ತಿದೆ. ವೋಟ್ ಹೊರಟು ಹೋಗುತ್ತದೆ ಎಂಬ ಕಾರಣಕ್ಕೆ ಪ್ರಗತಿಪರ, ಮುಸಲ್ಮಾನರ ಜೊತೆ ಕಾಂಗ್ರೆಸ್ ಸೇರಿಕೊಂಡಿದೆ ಎಂದು ದೂರಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

20 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

20 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

20 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

21 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

22 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

22 hours ago