ಉಡುಪಿ : ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ರಚಿಸಲಾದ ಐದು ಪೊಲೀಸ್ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.
ಈಗಾಗಲೇ ಹಂತಕ ಹೋಗಿರುವ ಮಾರ್ಗದಲ್ಲಿರುವ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆತ ಕೊಲೆಗೈದು ನೇಜಾರಿನಿಂದ ಸಂತೆಕಟ್ಟೆಗೆ, ಸಂತೆಕಟ್ಟೆಯಿಂದ ಉಡುಪಿಗೆ, ಉಡುಪಿಯಿಂದ ಉದ್ಯಾವರದವರೆಗೆ ಹೋಗಿರುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಆತ ರಿಕ್ಷಾ ಮತ್ತು ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿ ಯಿಂದ ಕಂಡುಬಂದಿದೆ.
ಹಣಕಾಸು ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಹಂತಕ ಸುಪಾರಿ ಕಿಲ್ಲರ್ ಎಂಬ ಅನುಮಾನ ವ್ಯಕ್ತವಾಗಿದೆ. ಆ ದಿಕ್ಕಿನಲ್ಲಿ ಪೊಲೀಸ್ ತಂಡ ತನಿಖೆ ಮುಂದುವರೆಸಿದೆ. ಈವರೆಗೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…