Featured

ಉಡುಪಿ : ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ;  ಪೊಲೀಸರಿಂದ ವಿವಿಧ ಆಯಾಮಗಳಲ್ಲಿ ತನಿಖೆ – vishwanews24

ಉಡುಪಿ : ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ;  ಪೊಲೀಸರಿಂದ ವಿವಿಧ ಆಯಾಮಗಳಲ್ಲಿ ತನಿಖೆ

ಉಡುಪಿ : ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ರಚಿಸಲಾದ ಐದು ಪೊಲೀಸ್ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಈಗಾಗಲೇ ಹಂತಕ ಹೋಗಿರುವ ಮಾರ್ಗದಲ್ಲಿರುವ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆತ ಕೊಲೆಗೈದು ನೇಜಾರಿನಿಂದ ಸಂತೆಕಟ್ಟೆಗೆ, ಸಂತೆಕಟ್ಟೆಯಿಂದ ಉಡುಪಿಗೆ, ಉಡುಪಿಯಿಂದ ಉದ್ಯಾವರದವರೆಗೆ ಹೋಗಿರುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಆತ ರಿಕ್ಷಾ ಮತ್ತು ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿ ಯಿಂದ ಕಂಡುಬಂದಿದೆ.

ಹಣಕಾಸು ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಹಂತಕ ಸುಪಾರಿ ಕಿಲ್ಲರ್ ಎಂಬ ಅನುಮಾನ ವ್ಯಕ್ತವಾಗಿದೆ. ಆ ದಿಕ್ಕಿನಲ್ಲಿ ಪೊಲೀಸ್ ತಂಡ ತನಿಖೆ ಮುಂದುವರೆಸಿದೆ. ಈವರೆಗೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

55 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago