Featured

ಉಡುಪಿ: ನೇಜಾರು ಕಗ್ಗೊಲೆ ಪ್ರಕರಣ ; ಅ.24ಕ್ಕೆ ವಿಚಾರಣೆ ಮುಂದೂಡಿಕೆ – vishwanews24

ಉಡುಪಿ: ನೇಜಾರು ಕಗ್ಗೊಲೆ ಪ್ರಕರಣ – ಅ.24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ನೀಡಿದೆ.

ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿ ಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್ ಚೌಗುಲೆ ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ ಗುರುರಾಜ್ ಜಿ.ಎಸ್. ಹಾಜರಿದ್ದರು.

ಈ ಸಂದರ್ಭ ಆರೋಪಿಯು ‘ನನ್ನನ್ನು ಕ್ವಾರಂಟೈನ್ ಜೈಲಿನಲ್ಲಿ ಇರಿಸಲಾಗಿದೆ ಮತ್ತು ನಾನು ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ’ ಎಂದು ನ್ಯಾಯಾಧೀಶರ ಮುಂದೆ ಹೇಳಿದನು. ಆದುದರಿಂದ ನನ್ನನ್ನು ಮುಖ್ಯ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆತ ನ್ಯಾಯಾಧೀಶರಲ್ಲಿ ಮನವಿ ಮಾಡಿದನು.

ಆರೋಪಿ ಅಹವಾಲು ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಜೈಲು ಅಧೀಕ್ಷಕರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರಾಗುವಂತೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಸೂಚಿಸಿದರು. ಅದರಂತೆ ಹಾಜರಾದ ಜೈಲು ಅಧೀಕ್ಷರರು, ಮುಖ್ಯ ಜೈಲಿನಲ್ಲಿ ಆರೋಪಿಗೆ ಬೆದರಿಕೆ ಇರುವುದರಿಂದ ಸುರಕ್ಷತೆ ದೃಷ್ಠಿ ಯಿಂದ ಅಲ್ಲಿ ಇರಿಸಲಾಗಿದೆ ಎಂದರು. ಆರೋಪಿ ಉದ್ದೇಶಪೂರ್ವಕವಾಗಿ ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಜೈಲು ಅಧೀಕ್ಷಕರು ಕೋರ್ಟ್ ಮುಂದೆ ತಿಳಿಸಿದರು.

ಬಳಿಕ ನ್ಯಾಯಾಧೀಶರು ಆರೋಪಿಗೆ ಆಹಾರ ಮತ್ತು ನೀರನ್ನು ತೆಗೆದು ಕೊಳ್ಳುವಂತೆ ನಿರ್ದೇಶನ ನೀಡಿದರು. ಆರೋಪಿಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು ಮತ್ತು ಅಗತ್ಯವಿದ್ದರೆ ಆತನಿಗೆ ವೈದ್ಯಕೀಯ ನೆರವು ನೀಡಬೇಕು ಎಂದು ನ್ಯಾಯಾಧೀಶರು ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಇದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

3 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

3 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

3 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

6 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

6 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

6 hours ago