ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ರುವ ಹಿನ್ನೆಲೆಯಲ್ಲಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆರಂಭಿಸಲು ಪ್ರಕರಣವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇಂದು ಒಪ್ಪಿಸಿತು.
ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯ ಪರಿಶೀಲನೆ ಪೂರ್ಣಗೊಂಡ ಬಳಿಕ ವಕೀಲರಿಗೆ 15 ಸಂಪುಟಗಳ 2202 ಪುಟಗಳ ದೋಷಾ ರೋಪಣಾ ಪಟ್ಟಿಯನ್ನು ನೀಡಲಾಯಿತು.
ಈ ವೇಳೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಹಾಗೂ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.
ಮುಂದೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಸೇಷನ್ಸ್ ಕೇಸು(ಎಸ್‌ಸಿ) ನಂಬರ್ ನೀಡಲಾಗುತ್ತದೆ. ನಂತರ ಆರೋಪಿಯನ್ನು ಮುಂದಿನ ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯ ಕಾರಾಗೃಹಕ್ಕೆ ನೋಟೀಸು ಜಾರಿ ಮಾಡುತ್ತದೆ. ಆದುದರಿಂದ ಆರೋಪಿ ಪ್ರವೀಣ್ ಚೌಗುಲೆನ್ನು ಮುಂದಿನ ವಿಚಾರಣೆ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕೋರ್ಟಗೆ ಹಾಜರು ಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…