Featured

ಉಡುಪಿ: ನೇಜಾರು ಕೊಲೆ ಪ್ರಕರಣ : ಆರೋಪಿ ಪ್ರವೀಣ್‌ ಚೌಗಲೆ ನ್ಯಾಯಾಲಯಕ್ಕೆ ಹಾಜರು – Vishwanews24

ಉಡುಪಿ: ನೇಜಾರು ಕೊಲೆ ಪ್ರಕರಣ : ಆರೋಪಿ ಚೌಗಲೆ ನ್ಯಾಯಾಲಯಕ್ಕೆ ಹಾಜರು

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿ ಮೇಲೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಯಿತು.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ದಿನೇಶ್ ಹೆಗ್ಡೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು.

ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಭದ್ರತೆ ಉಸ್ತುವಾರಿಯನ್ನು ಉಡುಪಿ ಡಿವ್ಯೆಎಸ್ಪಿ ಪ್ರಭು ಡಿ.ಟಿ. ವಹಿಸಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

40 minutes ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 hour ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 hour ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago