ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ ಅವರನ್ನು ನಿಯೋಗವೊಂದು ಉಡುಪಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಸಂತ್ರಸ್ತ ಕುಟುಂಬದ ನೂರ್ ಮುಹಮ್ಮದ್ ಅವರ ಮಗ ಅಸಾದ್ ಅವರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ನೀಡಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.
ನಿಯೋಗದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ಡಿ.ಕೆ.ಅಶೋಕ್, ಮಾಜಿ ಮೇಯರ್ ಭಾಸ್ಕರ ಮೊಲಿ, ಮುಖಂಡರಾದ ಉದಯ ಕುಮಾರ್ ಮುನಿಯಾಲು, ವ್ನಿೇಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ ಕಾರ್ಕಳ, ಪ್ರಭಾಕರ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…