Featured

ಉಡುಪಿ: ನೇಜಾರು ನಾಲ್ವರ ಹತ್ಯೆ – ಊಹಾಪೋಹದ, ಚಾರಿತ್ರ್ಯ ಹನನದ ವರದಿಗಾರಿಕೆ ಬೇಡ: ಜಿಲ್ಲಾ ಮುಸ್ಲಿಂ ಒಕ್ಕೂಟ – vishwanews24

ಉಡುಪಿ: ನೇಜಾರು ನಾಲ್ವರ ಹತ್ಯೆ – ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು  ಸರಕಾರ ನೇಮಿಸಬೇಕು :  ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ

ಉಡುಪಿ : ನೇಜಾರಿನಲ್ಲಿ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು ಎರಡು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಡುಪಿ ಪೋಲೀಸರ ಈ ದಕ್ಷತೆ ಹಾಗು ಚುರುಕಿನ ಕಾರ್ಯಾಚರಣೆ ಅಭಿನಂದನಾರ್ಹವಾಗಿದೆ. ಭೀಕರ ಕಗ್ಗೊಲೆಗಳನ್ನು ನಡೆಸಿದ ಹಂತಕನನ್ನು ತಡ ಮಾಡದೇ ಬಂಧಿಸಿರುವುದರಿಂದ ನೇಜಾರು ಪರಿಸರ ಮಾತ್ರವಲ್ಲ ಇಡೀ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಎಲ್ಲ ಪೊಲೀಸ್ ಸಿಬ್ಬಂದಿಗೆ ಇದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಹೊಣೆಗಾರರ ತುರ್ತು ಸಭೆ ಬಳಿಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಕೆಲವು ಚಾನಲ್ ಗಳು, ವೆಬ್ ಸೈಟ್ ಗಳು ಸಹಿತ ಮಾಧ್ಯಮದ ಕೆಲವು ವಿಭಾಗಗಳಲ್ಲಿ ಕಗ್ಗೊಲೆಯಾಗಿರುವ ಕುಟುಂಬದ ಸದಸ್ಯರ ಬಗ್ಗೆ ಕೀಳು ಅಭಿರುಚಿಯ, ಆಧಾರ ರಹಿತ ಊಹಾಪೋಹಗಳನ್ನೇ ಅಧಿಕೃತ ಸುದ್ದಿಯಂತೆ ಪ್ರಕಟಿಸುತ್ತಿರುವುದು ಅತ್ಯಂತ ಖಂಡನಾರ್ಹವಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ. ಈಗಷ್ಟೇ ಹಂತಕನ ಬಂಧನವಾಗಿದೆ. ಆತನ ಪೂರ್ಣ ವಿಚಾರಣೆಗಾಗಿ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹತ್ಯಾಕಾಂಡದ ಹಿಂದಿನ ನಿಜವಾದ ಕಾರಣಗಳು ಪೋಲೀಸರ ಸಮಗ್ರ ತನಿಖೆ ಹಾಗು ವಿಚಾರಣೆ ಬಳಿಕವೇ ಗೊತ್ತಾಗಬೇಕಿದೆ. ಹೀಗಿರುವಾಗ ಕೆಲವು ಮಾಧ್ಯಮಗಳು ತೀರಾ ಬೇಜವಾಬ್ದಾರಿಯುತವಾಗಿ ವದಂತಿಗಳು, ಊಹಾಪೋಹಗಳನ್ನು ಆಧರಿಸಿ ತೀರಾ ಕೀಳು ಮಟ್ಟದ ಹಾಗು ಕೊಲೆಯಾದವರ ಚಾರಿತ್ರ್ಯ ಹನನವಾಗುವಂತಹ ವರದಿಗಳನ್ನು ಪ್ರಕಟಿಸುವುದು ಅತ್ಯಂತ ಖಂಡನೀಯ. ಕಾರಣ ಏನಿದ್ದರೂ ಇಂತಹದೊಂದು ಹತ್ಯಾಕಾಂಡಕ್ಕೆ ಸಮರ್ಥನೆ ಇಲ್ಲ ಎಂಬುದು ಅತ್ಯಂತ ಸ್ಪಷ್ಟವಾಗಿದೆ. ಆ ಬಗ್ಗೆ ಯಾರಿಗೂ ಯಾವುದೇ ಸಂಶಯವಿಲ್ಲ. ಹಾಗಾಗಿ ಈಗ ಪೋಲೀಸರ ವಿಚಾರಣೆ ಮುಗಿಯುವವರೆಗೆ ಎಲ್ಲರೂ ತಾಳ್ಮೆಯಿಂದ ಸಹಕರಿಸಬೇಕಾಗಿದೆ. ಈ ಸಂದರ್ಭದಲ್ಲಿ ವದಂತಿಗಳನ್ನು ಹರಡಬಾರದು. ಮಾಧ್ಯಮಗಳು ಇನ್ನಷ್ಟು ಸಂಯಮದಿಂದ ವರದಿಗಾರಿಕೆ ಮಾಡಬೇಕು. ಇಂತಹ ಆಘಾತಕಾರಿ ಘಟನೆಯನ್ನು ತಮ್ಮ ಟಿ ಆರ್ ಪಿ ಹೆಚ್ಚಿಸುವ ದಾಳವಾಗಿ ಯಾವುದೇ ಮಾಧ್ಯಮ ಬಳಸಬಾರದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ.

ಉಡುಪಿಯ ಇತಿಹಾಸದಲ್ಲೇ ನಡೆದಿರುವ ಈ ಅತ್ಯಂತ ಬರ್ಬರ ಹತ್ಯಾಕಾಂಡದ ಸಮಗ್ರ ತನಿಖೆ ನಡೆಯಬೇಕು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಆದಷ್ಟು ಶೀಘ್ರವಾಗಿ ಮುಗಿಯಬೇಕು. ಆರೋಪಿ ಹಾಗು ಆತನ ಹಿಂದೆ ಯಾರೇ ಇದ್ದರೂ ಅವರೆಲ್ಲರಿಗೂ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಅದಕ್ಕಾಗಿ ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಸರಕಾರ ನೇಮಿಸಬೇಕು ಎಂದು ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago