ಉಡುಪಿ : ಉಡುಪಿಯ ನೇಜಾರಿನಲ್ಲಿ ಗಗನಸಖಿ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರವೀಣ್ ಚೌಗಲೆ (35) ಎಂಬಾತನನ್ನು ಬಂಧಿಸಿದ್ದು, ಆತನ ಬಂಧನದ ಬಳಿಕ ಕೆಲವು ಸಂಗತಿಗಳು ಬೆಳಕಿಗೆ ಬಂದಿವೆ.
ಮೂಲಗಳ ಪ್ರಕಾರ, ಪ್ರವೀಣ್ ಚೌಗಲೆ ಮತ್ತು ಹತ್ಯೆಯಾದ ಗಗನಸಖಿ ಅಯ್ನಾಜ್ ಅವರು ಸಹೋದ್ಯೋಗಿಗಳಾಗಿದ್ದರು ಎಂದು ತಿಳಿದು ಬಂದಿದೆ.
ಇನ್ನು ಅಯ್ನಾಜ್ ಮತ್ತು ಆರೋಪಿ ಪ್ರವೀಣ್ ನಡುವಿನ ಪ್ರೇಮದಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಎಲ್ಲಾ ರೀತಿಯ ತನಿಖೆಯನ್ನು ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನವೆಂಬರ್ 12ರಂದು ತಾಯಿ ಹಸೀನಾ(46), ಪುತ್ರಿಯರಾದ ಅಫ್ನಾನ್ (23), ಅಯ್ನಾಜ್ (21) ಮತ್ತು ಪುತ್ರ ಆಸೀಮ್ (12) ನನ್ನು ಹತ್ಯೆ ಮಾಡಲಾಗಿದ್ದು, ಘಟನೆಯಲ್ಲಿ ಅಯ್ನಾಜ್ ಅವರ ಅಜ್ಜಿ ಹಾಜಿರಾಬಿ ಅವರು ಗಾಯಗೊಂಡಿದ್ದು ಈಗ ಚೇತರಿಸಿಕೊಂಡಿದ್ದಾರೆ.
ಎರಡು ದಿನಗಳ ಶೋಧದ ನಂತರ ಆರೋಪಿ ಪ್ರವೀಣ್ ನನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ.
ಇನ್ನು ಪ್ರವೀಣ್ ಈ ಹಿಂದೆ ಸಿಆರ್ಪಿಎಫ್ನಲ್ಲಿ ಪೊಲೀಸ್ ಆಗಿದ್ದರು ಎಂದು ವರದಿಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…