Featured

ಉಡುಪಿ: ನೇಜಾರು ಹತ್ಯೆ ಪ್ರಕರಣ – ಕೊಲೆಯಾದ ಗನಸಖಿ ಅಯ್ನಾಜ್‌ ಸಹೋದ್ಯೋಗಿಯಿಂದಲೇ ಕೃತ್ಯ – vishwanews24

ಉಡುಪಿ: ನೇಜಾರು ಹತ್ಯೆ ಪ್ರಕರಣ – ಕೊಲೆಯಾದ ಗನಸಖಿ ಅಯ್ನಾಜ್‌ ಸಹೋದ್ಯೋಗಿಯಿಂದಲೇ ಕೃತ್ಯ

ಉಡುಪಿ : ಉಡುಪಿಯ ನೇಜಾರಿನಲ್ಲಿ ಗಗನಸಖಿ ಸೇರಿದಂತೆ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರವೀಣ್ ಚೌಗಲೆ (35) ಎಂಬಾತನನ್ನು ಬಂಧಿಸಿದ್ದು, ಆತನ ಬಂಧನದ ಬಳಿಕ ಕೆಲವು ಸಂಗತಿಗಳು ಬೆಳಕಿಗೆ ಬಂದಿವೆ.

ಮೂಲಗಳ ಪ್ರಕಾರ, ಪ್ರವೀಣ್ ಚೌಗಲೆ ಮತ್ತು ಹತ್ಯೆಯಾದ ಗಗನಸಖಿ ಅಯ್ನಾಜ್‌ ಅವರು ಸಹೋದ್ಯೋಗಿಗಳಾಗಿದ್ದರು ಎಂದು ತಿಳಿದು ಬಂದಿದೆ.

ಇನ್ನು ಅಯ್ನಾಜ್‌ ಮತ್ತು ಆರೋಪಿ ಪ್ರವೀಣ್ ನಡುವಿನ ಪ್ರೇಮದಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಎಲ್ಲಾ ರೀತಿಯ ತನಿಖೆಯನ್ನು ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನವೆಂಬರ್ 12ರಂದು ತಾಯಿ ಹಸೀನಾ(46), ಪುತ್ರಿಯರಾದ ಅಫ್ನಾನ್ (23), ಅಯ್ನಾಜ್‌ (21) ಮತ್ತು ಪುತ್ರ ಆಸೀಮ್ (12) ನನ್ನು ಹತ್ಯೆ ಮಾಡಲಾಗಿದ್ದು, ಘಟನೆಯಲ್ಲಿ ಅಯ್ನಾಜ್‌ ಅವರ ಅಜ್ಜಿ ಹಾಜಿರಾಬಿ ಅವರು ಗಾಯಗೊಂಡಿದ್ದು ಈಗ ಚೇತರಿಸಿಕೊಂಡಿದ್ದಾರೆ.

ಎರಡು ದಿನಗಳ ಶೋಧದ ನಂತರ ಆರೋಪಿ ಪ್ರವೀಣ್ ನನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ.

ಇನ್ನು ಪ್ರವೀಣ್ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಪೊಲೀಸ್ ಆಗಿದ್ದರು ಎಂದು ವರದಿಯಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago