ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಅನುಮತಿ ಪಡೆದು ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.
ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.
ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…