Featured

ಉಡುಪಿ : ನೇಜಾರು ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ – vishwanews24

ಉಡುಪಿ : ನೇಜಾರು ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಅನುಮತಿ ಪಡೆದು ಸೋಮವಾರ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.

ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.

ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

34 minutes ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

2 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

2 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

4 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

5 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

6 hours ago