Featured

ಉಡುಪಿ: ನೇಜಾರು ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗುಲೆ  ಪರೋಲ್ ಅರ್ಜಿ ತಿರಸ್ಕೃತ – Vishwanews24

ಉಡುಪಿ: ನೇಜಾರು ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗುಲೆ  ಪರೋಲ್ ಅರ್ಜಿ ತಿರಸ್ಕೃತ

ಉಡುಪಿ (Vishwanews24): ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ.

ಫೆ.1ರಂದು ನಿಧನರಾದ ತನ್ನ ಸಹೋದರ ನಿತೀನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಫೆ.8ರಂದು ಅರ್ಜಿ ಸಲ್ಲಿಸಲಾಗಿತ್ತು.

ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ವಾದ ಮಂಡಿಸಿದರು.

ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶೆ ದೀಪಾ, ಆರೋಪಿಯ ಪರೋಲ್ ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದರು. ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಹಾಜರಿದ್ದರು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಕೊನೆಯ ದಿನವಾದ ಫೆ.12ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ಮೂಲಗಳು ತಿಳಿಸಿವೆ. ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಪೊಲೀಸರ ಕೈಸೇರಿದೆ

Vishwa News 24

Recent Posts

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

29 minutes ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

52 minutes ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

3 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

3 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

6 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

6 hours ago