Featured

ಉಡುಪಿ : ನೇಜಾರು ಹತ್ಯೆ ಪ್ರಕರಣ- ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರೂ ಕೂಡ ಅತನಿಗೆ ಕಠಿಣ ಶಿಕ್ಷೆಯಾಗಬೇಕು : ರಮೇಶ್ ಕಾಂಚನ್ – vishwanews24

ಉಡುಪಿ : ನೇಜಾರು ಹತ್ಯೆ ಪ್ರಕರಣ- ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರೂ ಕೂಡ ಅತನಿಗೆ ಕಠಿಣ ಶಿಕ್ಷೆಯಾಗಬೇಕು : ರಮೇಶ್ ಕಾಂಚನ್

ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ದೀಪಾವಳಿಯ ಹಬ್ಬದಂದು ಬೆಳ್ಳಂಬೆಳಗ್ಗೆ ಅಕ್ರಮವಾಗಿ ಮನೆಗೆ ನುಗ್ಗಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆಯು ನಡೆದಿದ್ದು ಇದು ಅತ್ಯಂತ ಆಘಾತಕಾರಿ ಘಟನೆಯಾಗಿದ್ದು ಇಡೀ ಜಿಲ್ಲೆಯು ದೀಪಾವಳಿ ಹಬ್ಬದ ಸಂಭ್ರದಲ್ಲಿರುವಾಗ ನೋವಿನ ವಾತಾವರಣ ಸೃಷ್ಟಿ ಮಾಡುವಂತಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಹೇಳಿದ್ದಾರೆ.

ಬುದ್ದಿವಂತರ ಜಿಲ್ಲೆ ಎಂದು ಹೆಸರು ಪಡೆದಿರುವ ಉಡುಪಿಯಲ್ಲಿ ಇಂತಹ ಅಮಾನುಷ ಘಟನೆ ನಡೆದಿರುವುದು ಇದೇ ಮೊದಲು ಹಾಗೂ ಅತ್ಯಂತ ಆಘಾತಕಾರಿ ವಿಚಾರವಾಗಿದೆ. ನೋವಿನಲ್ಲಿರುವ ಕುಟುಂಬದ ಸದಸ್ಯರೊಂದಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಜೊತೆಯಾಗಿದ್ದು ಪ್ರಕರಣದ ನಿಷ್ಪಕ್ಷಪಾತವಾದ ತನಿಖೆ ನಡೆಯುವಂತೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅವರ ತಂಡ ಕಾರ್ಯೋನ್ಮುಖವಾಗಿದೆ.

ಘಟನೆಯ ಮಾಹಿತಿಯನ್ನು ಈಗಾಗಲೇ ರಾಜ್ಯ ಗೃಹ ಸಚಿವರು ಪಡೆದುಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಪೊಲೀಸರಿಂದ ಮಾಹಿತಿಯನ್ನು ಪಡೆದಿದ್ದಾರೆ. ಪ್ರಕರಣದ ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರೂ ಕೂಡ ಆತನನ್ನು ಪೊಲೀಸರು ಆದಷ್ಟೂ ಬೇಗ ಬಂಧಿಸುವ ವಿಶ್ವಾಸವಿದ್ದು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಒಕ್ಕೊರಲ ಆಗ್ರಹವಾಗಿದೆ.

ಇನ್ನು ಮುಂದೆ ಇಂತಹ ಘಟನೆ ಜಿಲ್ಲೆಯಲ್ಲಿ ನಡೆಯದಂತೆ ಎಚ್ಚರವಹಿಸುವುದರೊಂದಿಗೆ ಆರೋಪಿಯನ್ನು ಪೊಲೀಸ್ ಇಲಾಖೆ ಅತೀ ಶೀಘ್ರದಲ್ಲಿ ಬಂಧಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago