ಉಡುಪಿ : ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಹಠಾತ್ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ(Nepal Flash Floods) ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಅವರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾಡಳಿತದಿಂದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನೇಪಾಳದಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಬಾಧಿತರ ವಿವರಗಳನ್ನು ತಕ್ಷಣವೇ ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ.
ಮಾಹಿತಿ ಒದಗಿಸುವ ವಿಧಾನ: ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರವಾದ ಸ್ಥಳ, ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ತುರ್ತು ಅಗತ್ಯಗಳ ವಿವರಗಳನ್ನು ಶುಲ್ಕ ರಹಿತ ಸಂಖ್ಯೆ: 1077, ದೂ.ಸಂಖ್ಯೆ: 0820-2574802 ಅಥವಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ಬಿಡುಗಡೆ ಮಾಡಲಾದ ಗೂಗಲ್ ಫಾರ್ಮ್ ಲಿಂಕ್ https://docs.google.com/forms/d/1gnw8B8vaYknr0Y2Lkn_fpWubPnKI6a8C4Em7co1Shbk/edit
ನಲ್ಲಿಯೂ ವಿವರಗಳನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…
ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…
ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…